ಮಧ್ಯಪ್ರದೇಶದಲ್ಲಿ ಬಸ್-ಆಟೋ ನಡುವೆ ಅಪಘಾತ: 13 ಮಂದಿ ಸಾವು

ಭೋಪಾಲ್, ಮಾರ್ಚ್ 23: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ವೇಗವಾಗಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.

ಪ್ರಯಾಣಿಕರಲ್ಲಿ 8 ಮಂದಿ ಮಹಿಳೆಯರು ಮತ್ತು ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರು ಆಸ್ಪತ್ರೆಗೆ ದಾಖಲಿಸಿದ ನಂತರ ಅಸುನೀಗಿದ್ದಾರೆ.

12 women, Man Killed In Auto-Bus Collision In Madhya Pradesh

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂತಿರುಗುತ್ತಿದ್ದರು ಎಂದು ಗ್ವಾಲಿಯರ್ ಎಸ್ ಪಿ ಅಮಿತ್ ಸಂಘಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+