ಬಿಜೆಪಿ ಸೇರಿದ ಮಧ್ಯಪ್ರದೇಶದ 22 ಕಾಂಗ್ರೆಸ್ ಶಾಸಕರು
ಭೋಪಾಲ್, ಮಾರ್ಚ್ 21 : ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಕಾರಣರಾದ 22 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದರು. ಮುಖ್ಯಮಂತ್ರಿ ಕಮಲನಾಥ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
22 ಶಾಸಕರ ರಾಜೀನಾಮೆ ಬಳಿಕ 15 ತಿಂಗಳ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಸರ್ಕಾರ ಪತನಗೊಳ್ಳಲು ಕಾರಣರಾದ ಎಲ್ಲಾ ಶಾಸಕರು ಶನಿವಾರ ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಇನ್ನೂ ಹಕ್ಕು ಮಂಡನೆ ಮಾಡಿಲ್ಲ.
ಮಾರ್ಚ್ 10ರಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದಿದ್ದರು. ಬಳಿಕ ಅವರು ಬಿಜೆಪಿ ಸೇರಿದ್ದರು. ಅವರನ್ನು ಬೆಂಬಲಿಸಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿತ್ತು.

ಸುಪ್ರೀಂಕೋರ್ಟ್ ಗುರುವಾರ ಸಂಜೆ 5 ಗಂಟೆಯೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಮುಖ್ಯಮಂತ್ರಿ ಕಮಲನಾಥ್‌ಗೆ ಸೂಚನೆ ನೀಡಿತ್ತು. ಆದರೆ, ಮಧ್ಯಾಹ್ನ 12 ಗಂಟೆಗೆ ಅವರು ರಾಜೀನಾಮೆ ನೀಡಿದ್ದರು.
ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಸದಸ್ಯ ಬಲ 230. ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಪ್ರಸ್ತುತ ಸದಸ್ಯ ಬಲ 206ಕ್ಕೆ ಕುಸಿದಿದೆ. ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 104.
Delhi: Rebel Madhya Pradesh Congress MLAs meet BJP President JP Nadda & BJP leader Jyotiraditya Scindia, at JP Nadda's residence. pic.twitter.com/acYIgtplV2
— ANI (@ANI) March 21, 2020
ವಿಧಾನಸಭೆಯಲ್ಲಿ ಕಾಂಗ್ರೆಸ್ ಸದನದಲ್ಲಿ 92 ಶಾಸಕ ಬಲ ಹೊಂದಿದೆ. ಬಿಜೆಪಿ 107 ಸದಸ್ಯ ಬಲವನ್ನು ಹೊಂದಿದ್ದು, ಯಾರ ಬೆಂಬಲವೂ ಇಲ್ಲದೆ ಬಿಜೆಪಿ ಪ್ರಸ್ತುತ ಸರ್ಕಾರವನ್ನು ರಚನೆ ಮಾಡಬುದಾಗಿದೆ. ರಾಜ್ಯಪಾಲರು ಪ್ರಸ್ತುತ ಬಹುದೊಡ್ಡ ಪಕ್ಷವಾದ ಬಿಜೆಪಿಯನ್ನು ಸರ್ಕಾರ ರಚನೆಗೆ ಇನ್ನೂ ಆಹ್ವಾನಿಸಿಲ್ಲ.
ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಎಲ್ಲಾ ಶಾಸಕರು ನವದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು. ಮತ್ತೊಂದು ಕಡೆ ಶಿವರಾಜ್ ಸಿಂಗ್ ಚೌವ್ಹಾಣ್ ರಾಜ್ಯಪಾಲರನ್ನು ಭೇಟಿಯಾಗಲು ತೆರಳಿದ್ದಾರೆ.












Click it and Unblock the Notifications