ಮಧ್ಯಪ್ರದೇಶದ 34 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್
ಭೋಪಾಲ್, ಏಪ್ರಿಲ್ 23: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ 34 ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಇರುವುದು ದೃಢವಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಎನ್ನುವುದು ತಿಳಿದುಬಂದಿದೆ.
ಭೋಪಾಲ್ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಉಪೇಂದ್ರ ಜೈನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳು ಸೈಬಲ್ ಸೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮ ಸೋಂಕು ಹರಡಲು ಪ್ರಮುಖ ಕಾರಣ ಎಂದು ಅವರು ಹೇಳಿದ್ದಾರೆ.
ತಬ್ಲಿಘಿ ಜಮಾತ್ ಕಾರ್ಯಕ್ರಮದಿಂದ ಮಧ್ಯಪ್ರದೇಶಕ್ಕೆ ಕೆಲವರು ಬಂದಿದ್ದರು. ಅವರನ್ನು ಪತ್ತೆ ಮಾಡಲು ಪೊಲೀಸ್ ಅಧಿಕಾರಿಗಳು ಹೋಗಿದ್ದರು. ಈ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಉಪೇಂದ್ರ ಜೈನ್ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 2100 ಪೊಲೀಸ್ ಸಿಬ್ಬಂದಿಗಳು ಕೊರೊನಾ ಭೀತಿಯಿಂದ ತಮ್ಮ ಮನೆಗೆ ಹೋಗುತ್ತಿಲ್ಲ. ತಮ್ಮಿಂದ ಕುಟುಂಬಕ್ಕೆ ಹರಡಬಾರದು ಎಂದು ಅವರು ಮನೆಯವರಿಂದ ದೂರು ಉಳಿದಿದ್ದಾರೆ.
ಮಧ್ಯಪ್ರದೇಶದಲ್ಲಿ 987 ಜನರಿಗೆ ಕೊರೊನಾ ಸೊಂಕು ಹರಡಿದೆ. 53 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.












Click it and Unblock the Notifications