ಕೋವಿಶೀಲ್ಡ್ ಎರಡನೇ ಡೋಸ್ ಪಡೆದ ಮಹಿಳಾ ಕ್ಲರ್ಕ್ ಸಾವು
ಭೋಪಾಲ್,ಫೆಬ್ರವರಿ 24: ಕೋವಿಶೀಲ್ಡ್ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಮಹಿಳಾ ಕ್ಲರ್ಕ್ ಸಾವನ್ನಪ್ಪಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಜನಿ ಅವರು ಬುಧವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಿಧನರಾದರು ಎಂದು ಡಾ. ಸಿಂಗಾರೆ ಹೇಳಿದ್ದಾರೆ.
ಮಧ್ಯ ಪ್ರದೇಶದ ಬಾರ್ವಾನಿ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದ 12 ಗಂಟೆಗಳ ನಂತರ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ 58 ವರ್ಷದ ಮಹಿಳಾ ಕ್ಲರ್ಕ್ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಅವರು ತಿಳಿಸಿದ್ದಾರೆ.ಮಂಗಳವಾರ ಸಂಜೆ, ಮಹಿಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬಾರ್ವಾನಿಯ ಮನೋರಮಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾರ್ವಾನಿ ಜಿಲ್ಲಾ ಸಿಎಮ್‌ಹೆಚ್‌ಒ ಡಾ.ಅನಿತಾ ಸಿಂಗಾರೆ ತಿಳಿಸಿದ್ದಾರೆ.
ಮೃತ ಮಹಿಳೆ ರಜನಿ ಸೇನ್ ಎಂದು ಗುರುತಿಸಲಾಗಿದ್ದು, ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಮ್‌ಹೆಚ್‌ಒ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಮಂಗಳವಾರ ಮಧ್ಯಾಹ್ನ 3.30 ರ ಸುಮಾರಿಗೆ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿತ್ತು.
28 ದಿನಗಳ ಹಿಂದೆ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆಯುವ ಮೊದಲು ಮತ್ತು ನಂತರ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ. ನಿನ್ನೆ ಎರಡನೇ ಡೋಸ್ ಲಸಿಕೆ ಪಡೆಯುವವರೂ ಮಹಿಳೆ ಆರೋಗ್ಯವಾಗಿಯೇ ಇದ್ದರು.












Click it and Unblock the Notifications