ಮಧ್ಯಪ್ರದೇಶದಲ್ಲಿ ಆಯತಪ್ಪಿ ಬಾವಿಗೆ ಬಿದ್ದ ಕಾರು: 6 ಮಂದಿ ದುರ್ಮರಣ
ಭೋಪಾಲ್, ಡಿಸೆಂಬರ್ 09: ಕಾರೊಂದು ಆಯತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಬಾವಿಗೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಘಟನೆ ಮಧ್ಯ ಪ್ರದೇಶದ ಛತರ್ಪುರ್ ಜಿಲ್ಲೆಯ ಮಹಾರಾಜಪುರ್ ಎಂಬಲ್ಲಿ ನಡೆದಿದೆ. ಕಾರಿನಲ್ಲಿ 9 ಮಂದಿ ಇದ್ದರು, ಅವರಲ್ಲಿ 6 ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಹಾರಾಜ್ ಪುರ್ ಪೊಲೀಸ್ ಠಾಣೆಯ ಉಸ್ತುವಾರಿ ಜೆ ವೈ ಖಾನ್ ತಿಳಿಸಿದ್ದಾರೆ.

ಮದುವೆ ಸಮಾರಂಭ ಮುಗಿಸಿಕೊಂಡು ಕಾರಿನಲ್ಲಿ ಬರುತ್ತಿದ್ದ ವೇಳೆ ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು, ರಾತ್ರಿ ವೇಳೆಯಾದ ಕಾರಣ ಕಾರು ಚಲಾಯಿಸುತ್ತಿದ್ದವರು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿರಬೇಕು ಎಂದು ಪೊಲೀಸರು ಶಂಕಿಸಲಾಗಿದೆ.












Click it and Unblock the Notifications