ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕುರುಡಾಗಿಸಿದ ಪಾಪಿಗಳು

ಭೋಪಾಲ್, ಏಪ್ರಿಲ್ 23: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಯನ್ನು ಕುರುಡಾಗಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಇಡೀ ದೇಶವೇ ಲಾಕ್‌ಡೌನ್‌ ಅಲ್ಲಿರುವಾಗ ಮನೆಯ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಷ್ಟೇ ಅಲ್ಲದೆ ಕಣ್ಣಿಗೆ ಗಂಭೀರ ಗಾಯ ಮಾಡಿದ್ದಾರೆ.

ದಮೋಹ್ ಜಿಲ್ಲೆಯಿಂದ 280 ಕಿ.ಮೀ. ದೂರದಲ್ಲಿರುವ ಜಬೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 Year Old Kidnapped Raped In Madhya Pradesh

ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ಬಾಲಕಿ ಇಂದು ಬೆಳಗ್ಗೆ ಮನೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಕೈಕಟ್ಟಿಹಾಕಲಾಗಿದೆ. ಬಾಲಕಿಯನ್ನು ಜಬಲಪುರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಣ್ಣುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಚವ್ಹಾಣ್ ಅವರು ಹೇಳಿದ್ದಾರೆ.

ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಚವ್ಹಾಣ್ ತಿಳಿಸಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಯ ಕಣ್ಣು ಕಾಣದಂತೆ ಮಾಡಲಾಗಿದೆ. ಕಣ್ಣುಗಳಿಗೆ ಗಂಭೀರ ಗಾಯಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+