ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದೋರ್ ಕಟ್ಟಡಕ್ಕೆ ಬೆಂಕಿ: 7 ಮಂದಿ ಸಾವು- ಹಲವರಿಗೆ ಗಾಯ

|
Google Oneindia Kannada News

ಇಂದೋರ್ ಮೇ 7: ಗಾಢವಾದ ನಿದ್ದೆ ವೇಳೆ ಎರಡು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಏಳು ಜನ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಜನರನ್ನು ಇದುವರೆಗೆ ರಕ್ಷಿಸಲಾಗಿದೆ. ಅದರಲ್ಲಿ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆಲಮಾಳಿಗೆಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇಂದೋರ್‌ನ ಸ್ವರ್ನ್ ಬಾಗ್ ಕಾಲೋನಿಯಲ್ಲಿರುವ ಕಟ್ಟಡದ ನೆಲಮಾಳಿಗೆಯಲ್ಲಿ ಇಂದು ಮುಂಜಾನೆ 3.10 ರ ಸುಮಾರಿಗೆ ನಿವಾಸಿಗಳು ಮಲಗಿದ್ದಾಗ ಮುಖ್ಯ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಅಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಮತ್ತು ವಾಹನಗಳಿಗೆ ಬೆಂಕಿ ವ್ಯಾಪಿಸಿ, ಇಡೀ ಕಟ್ಟಡಕ್ಕೆ ಬೆಂಕಿ ವೇಗವಾಗಿ ಹರಡಿದೆ.

7 Die In Fire At Building In Madhya Pradeshs Indore

ಪ್ರತಿ ಮಹಡಿಯಲ್ಲಿ ಅಗ್ನಿ ಸುರಕ್ಷತಾ ಸಾಧನಗಳನ್ನು ಅಳವಡಿಸದ ಕಾರಣ ಕಟ್ಟಡದ ಮಾಲೀಕ ಅನ್ಸಾರ್ ಪಟೇಲ್ ಅವರನ್ನು ಪೊಲೀಸರು ಬಂಧಿಸಿದ್ದು, ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈ ದುರಂತಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

7 Die In Fire At Building In Madhya Pradeshs Indore

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬದ ಸದಸ್ಯರಿಗೆ ಈ ಆಳವಾದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಮತ್ತು ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

English summary
Seven people were killed and several injured when a fire broke out in a two-storey building in Indore this morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X