ಮಧ್ಯಪ್ರದೇಶದಲ್ಲಿ ಅಪಘಾತ: 8 ಕಾರ್ಮಿಕರು ಸಾವು, 50 ಮಂದಿಗೆ ಗಾಯ
ಗುನಾ, ಮೇ 14: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಬುಧವಾರ ರಾತ್ರಿ ಗುನಾದ ಪಿಎಸ್ ಪ್ರದೇಶದಲ್ಲಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರಕ್ನಲ್ಲಿದ್ದ ಎಂಟು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 50 ಮಂದಿಗೆ ಗಂಭೀರ ಗಾಯಗಳಾಗಿವೆ.
ಕಾರ್ಮಿಕರು ಮಹಾರಾಷ್ಟ್ರದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ತವರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಾಗೆಯೇ ಬುಧವಾರ ಉತ್ತರ ಪ್ರದೇಶದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.ಕಳೆದ ರಾತ್ರಿ ಉತ್ತರ ಪ್ರದೇಶದ ಕೊಟ್ವಾಲಿ ಪ್ರದೇಶದ ಸಹರಾನ್ಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು 6 ಜನ ಕಾರ್ಮಿಕರು ತಮ್ಮ ಜೀವ ಕಳೆದುಕೊಂಡಿದ್ದಾರೆ. ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಮುಜಫರ್ನಗರ-ಸಹರಾನ್ಪುರ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 6 ವಲಸೆ ಕಾರ್ಮಿಕರಿಗೆ ತಡರಾತ್ರಿ ಘಲೌಲಿ ಚೆಕ್ಪೋಸ್ಟ್ ಬಳಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಈ ಅಪಘಾತದಲ್ಲಿ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ಕು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮೀರತ್ ವಲಯದ ಎಡಿಜಿ ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ. ಇವರೆಲ್ಲರೂ ಪಂಜಾಬ್ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications