ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶದಲ್ಲಿ ಅಪಘಾತ: 8 ಕಾರ್ಮಿಕರು ಸಾವು, 50 ಮಂದಿಗೆ ಗಾಯ

|
Google Oneindia Kannada News

ಗುನಾ, ಮೇ 14: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಬುಧವಾರ ರಾತ್ರಿ ಗುನಾದ ಪಿಎಸ್ ಪ್ರದೇಶದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರಕ್‌ನಲ್ಲಿದ್ದ ಎಂಟು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 50 ಮಂದಿಗೆ ಗಂಭೀರ ಗಾಯಗಳಾಗಿವೆ.

ರಸ್ತೆಯಲ್ಲಿ ಸಾಗುತ್ತಿದ್ದ ಕಾರ್ಮಿಕರಿಗೆ ಬಸ್ ಡಿಕ್ಕಿ, 6 ಮಂದಿ ಸಾವುರಸ್ತೆಯಲ್ಲಿ ಸಾಗುತ್ತಿದ್ದ ಕಾರ್ಮಿಕರಿಗೆ ಬಸ್ ಡಿಕ್ಕಿ, 6 ಮಂದಿ ಸಾವು

ಕಾರ್ಮಿಕರು ಮಹಾರಾಷ್ಟ್ರದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ತವರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

8 Migrant Workers Returning Home Killed In Road Accident At Madhya Pradesh

ಹಾಗೆಯೇ ಬುಧವಾರ ಉತ್ತರ ಪ್ರದೇಶದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.ಕಳೆದ ರಾತ್ರಿ ಉತ್ತರ ಪ್ರದೇಶದ ಕೊಟ್ವಾಲಿ ಪ್ರದೇಶದ ಸಹರಾನ್‌ಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು 6 ಜನ ಕಾರ್ಮಿಕರು ತಮ್ಮ ಜೀವ ಕಳೆದುಕೊಂಡಿದ್ದಾರೆ. ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಮುಜಫರ್ನಗರ-ಸಹರಾನ್‌ಪುರ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 6 ವಲಸೆ ಕಾರ್ಮಿಕರಿಗೆ ತಡರಾತ್ರಿ ಘಲೌಲಿ ಚೆಕ್‌ಪೋಸ್ಟ್ ಬಳಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಈ ಅಪಘಾತದಲ್ಲಿ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ಕು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮೀರತ್ ವಲಯದ ಎಡಿಜಿ ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ. ಇವರೆಲ್ಲರೂ ಪಂಜಾಬ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

English summary
In a tragic incident, 8 migrant labourers were killed in a road mishap in Madhya Pradesh. The incident took place at Guna late last night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X