ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಬೆಂಗಳೂರು ವಿಮಾನದಲ್ಲಿ ಮಗು ಸಾವು, ತುರ್ತು ಭೂಸ್ಪರ್ಶ

|
Google Oneindia Kannada News

ಇಂದೋರ್, ಡಿಸೆಂಬರ್ 31: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಇಂದೋರ್‌ನಲ್ಲಿ ಈ ಘಟನೆ ಸಂಭವಿಸಿದೆ, ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವಿಮಾನದಲ್ಲಿ ಅನಾರೋಗ್ಯಕ್ಕೀಡಾಗಿದ್ದ 7 ತಿಂಗಳ ಶಿಶು ಮಾರ್ಗ ಮಧ್ಯೆಯೇ ಮೃತಪಟ್ಟಿದೆ.

ಇಂದೋರ್ ನ ದೇವಿ ಅಹಿಲಿಬಾಯಿ ಹೊಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರೂ ಮಗು ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ.
ಮಗುವನ್ನು ಇಂದೋರ್ ನ SAIMS ಆಸ್ಪತ್ರೆಗೆ ದಾಖಲಿಸಲಾಯಿತು. ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಸಾವನ್ನಪ್ಪಿದೆ ಎಂದು ಘೋಷಣೆ ಮಾಡಿದರು. ಮೃತ ಮಗುವನ್ನು ಉತ್ತರ ಪ್ರದೇಶ ಗೋರಕ್ ಪುರ ದಂಪತಿ ಮಗು ದೇವ್ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಮೃತ ಮಗು ಜಲಮಸ್ತಿಷ್ಕ ರೋಗ (Hydrocephalus)ದಿಂದ ಬಳಲುತ್ತಿತ್ತು.

ಮೂಲಗಳ ಪ್ರಕಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ವಿಮಾನದಲ್ಲಿ ದಂಪತಿಗಳೊಂದಿಗೆ ಮಗು ಕೂಡ ಪ್ರಯಾಣಿಸುತ್ತಿತ್ತು. ಮಾರ್ಗ ಮಧ್ಯೆಯೇ ಮಗು ಅನಾರೋಗ್ಯಕ್ಕೀಡಾಗಿದ್ದು, ಮಗು ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿತ್ತು.

Flight

ಇದನ್ನು ಗಮನಿಸಿದ ಪೋಷಕರು ಕೂಡಲೇ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನದ ಮಾರ್ಗ ಬದಲಿಸಿ ಇಂದೋರ್ ನತ್ತ ತಿರುಗಿಸಿದ್ದಾರೆ. ಇಂದೋರ್ ನ ದೇವಿ ಅಹಿಲಿಬಾಯಿ ಹೊಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತಾದರೂ ಅಷ್ಟು ಹೊತ್ತಿಗೆ ಮಗು ಆರೋಗ್ಯ ಪರಿಸ್ಥಿತಿ ತೀವ್ರ ಬಿಗಡಾಯಿಸಿತ್ತು.

Recommended Video

ಮಕ್ಕಳನ್ನು ಶಾಲೆಗೆ ಕಳುಹಿಸೋದು ಎಷ್ಟರ ಮಟ್ಟಿಗೆ ಸುರಕ್ಷಿತ | Oneindia Kannada

ಅಪರೂಪದ ಖಾಯಿಲೆಯಾಗಿದ್ದು, ಮಗುವಿನ ಚಿಕಿತ್ಸೆಗಾಗಿ ಮಗುವಿನ ಪೋಷಕರು ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

English summary
The life of a seven-month-old boy could not be saved despite a New Delhi-to-Bengaluru flight of a private airline making emergency landing at the Devi Ahilybai Holkar International Airport here on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X