ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್
ಭೋಪಾಲ್, ಜೂನ್ 15: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪದ ಮೇಲೆ ಭೋಪಾಲ್ ಕ್ರೈಂ ಬ್ರ್ಯಾಂಚ್ ಎಫ್‌ಐಆರ್ ದಾಖಲಿಸಿದೆ. ಬಿಜೆಪಿ ದಿಗ್ವಿಜಯ್ ಸಿಂಗ್ ವಿರುದ್ಧ ದೂರು ಸಲ್ಲಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಐಪಿಸಿಯ ವಿಭಿನ್ನ ಸೆಕ್ಷನ್‌ಗಳ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.












Click it and Unblock the Notifications