ಕೊರೊನಾ ಸೋಂಕಿಗೆ ಬಲಿಯಾದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್

ಭೋಪಾಲ್, ಮಾರ್ಚ್ 02: ಕೊರೊನಾ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಸಾವನ್ನಪ್ಪಿದ್ದಾರೆ.

ಮಧ್ಯಪ್ರದೇಶದ ಖಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಕೊರೊನಾಗೆ ಬಲಿಯಾಗಿದ್ದಾರೆ. ನಂದಕುಮಾರ್ ಸಿಂಗ್ ಚೌಹಾಣ್ ಅವರು ಕೆಲವು ದಿನಗಳ ಹಿಂದಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ಅವರನ್ನು ದೆಹಲಿ-ಎನ್ ಸಿಆರ್ ನಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, 'ಖಂಡ್ವಾದ ಲೋಕಸಭಾ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಅವರ ನಿಧನದಿಂದ ತುಂಬಾ ನೋವಾಗಿದೆ.

BJP Lok Sabha MP Nand Kumar Singh Chauhan Passes Away

ಸಂಸತ್ತಿನ ನಡಾವಳಿಗಳು, ಸಾಂಸ್ಥಿಕ ಕೌಶಲ್ಯಗಳು ಮತ್ತು ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಪ್ರಯತ್ನಗಳಿಗೆ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಹೇಳಿರುವ ಪ್ರಧಾನಿ ಮೋದಿ ಅವರ ಚೌಹಾಣ್ ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ನಂದಕುಮಾರ್ ಸಿಂಗ್ ಚೌಹಾಣ್ ಅವರ ಸಾವಿಗೆ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಮತ್ತು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.

ನಂದಕುಮಾರ್ ಸಿಂಗ್ ಚೌಹಾಣ್ ಅವರ ಸಾವಿನಿಂದಾಗಿ ಅತೀವ ದುಃಖವಾಗಿದೆ. ಬಿಜೆಪಿ ಆದರ್ಶ ಕೆಲಸಗಾರ, ಸಮರ್ಥ ಸಂಘಟಕರಾಗಿದ್ದರು, ಉತ್ತಮ ನಾಯಕನನ್ನು ಕಳೆದುಕೊಂಡಿದೆ. ಇದು ನನಗೆ ವೈಯಕ್ತಿಕ ನಷ್ಟ ಎಂದು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+