• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಸೋಂಕಿಗೆ ಬಲಿಯಾದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್

|
Google Oneindia Kannada News

ಭೋಪಾಲ್, ಮಾರ್ಚ್ 02: ಕೊರೊನಾ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಸಾವನ್ನಪ್ಪಿದ್ದಾರೆ.

ಮಧ್ಯಪ್ರದೇಶದ ಖಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಕೊರೊನಾಗೆ ಬಲಿಯಾಗಿದ್ದಾರೆ. ನಂದಕುಮಾರ್ ಸಿಂಗ್ ಚೌಹಾಣ್ ಅವರು ಕೆಲವು ದಿನಗಳ ಹಿಂದಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ಚೀನಾದಲ್ಲಿ 8 ತಿಂಗಳ ಬಳಿಕ ಕೊರೊನಾ ಸೋಂಕಿಗೆ ಮೊದಲ ಬಲಿ ಚೀನಾದಲ್ಲಿ 8 ತಿಂಗಳ ಬಳಿಕ ಕೊರೊನಾ ಸೋಂಕಿಗೆ ಮೊದಲ ಬಲಿ

ಅವರನ್ನು ದೆಹಲಿ-ಎನ್ ಸಿಆರ್ ನಲ್ಲಿರುವ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, 'ಖಂಡ್ವಾದ ಲೋಕಸಭಾ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ಅವರ ನಿಧನದಿಂದ ತುಂಬಾ ನೋವಾಗಿದೆ.

ಸಂಸತ್ತಿನ ನಡಾವಳಿಗಳು, ಸಾಂಸ್ಥಿಕ ಕೌಶಲ್ಯಗಳು ಮತ್ತು ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಪಡಿಸುವ ಪ್ರಯತ್ನಗಳಿಗೆ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಹೇಳಿರುವ ಪ್ರಧಾನಿ ಮೋದಿ ಅವರ ಚೌಹಾಣ್ ಅವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೊನಾ ಸೋಂಕುರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೊನಾ ಸೋಂಕು

ನಂದಕುಮಾರ್ ಸಿಂಗ್ ಚೌಹಾಣ್ ಅವರ ಸಾವಿಗೆ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಮತ್ತು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.

ನಂದಕುಮಾರ್ ಸಿಂಗ್ ಚೌಹಾಣ್ ಅವರ ಸಾವಿನಿಂದಾಗಿ ಅತೀವ ದುಃಖವಾಗಿದೆ. ಬಿಜೆಪಿ ಆದರ್ಶ ಕೆಲಸಗಾರ, ಸಮರ್ಥ ಸಂಘಟಕರಾಗಿದ್ದರು, ಉತ್ತಮ ನಾಯಕನನ್ನು ಕಳೆದುಕೊಂಡಿದೆ. ಇದು ನನಗೆ ವೈಯಕ್ತಿಕ ನಷ್ಟ ಎಂದು ಟ್ವೀಟ್ ಮಾಡಿದ್ದಾರೆ.

English summary
Bharatiya Janata Party (BJP) MP from Madhya Pradesh's Khandwa, Nand Kumar Singh Chauhan passed away at Medanta Hospital in Gurugram on Monday(Mar 1) night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X