ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದಾತ್ಮಕ ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್ ಗೆ ಬಿಜೆಪಿ ತಪರಾಕಿ

|
Google Oneindia Kannada News

ಭೋಪಾಲ್, ಜುಲೈ 22: "ನಾನು ಸಂಸದಳಾಗಿ ಆಯ್ಕೆಯಾಗಿರುವುದು ಟಾಯ್ಲೆಟ್ ಕ್ಲೀನ್ ಮಾಡುವುದಕ್ಕಲ್ಲ" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಭೋಪಾಲ್ ಕ್ಷೇತ್ರದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ನ್ನು ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ಇಂಥ ವಿವಾದಾತ್ಮಕ ಹೇಳಿಕೆಗಳ್ನು ನೀಡುವುದರಿಂದ ದೂರವುಳಿಯಿರಿ" ಎಂದುದ ಜೆಪಿ ನಡ್ಡಾ ಅವರು ವಾರ್ನಿಂಗ್ ನೀಡಿದ್ದಾರೆ ಎನ್ನಲಾಗಿದೆ.

ಮಾಲೆಂಗಾವ್ ಸ್ಫೋಟ ಪ್ರಕರಣ: ಸಾಧ್ವಿ ಪ್ರಗ್ಯಾ ಸಿಂಗ್ ಗೆ ಹಿನ್ನಡೆಮಾಲೆಂಗಾವ್ ಸ್ಫೋಟ ಪ್ರಕರಣ: ಸಾಧ್ವಿ ಪ್ರಗ್ಯಾ ಸಿಂಗ್ ಗೆ ಹಿನ್ನಡೆ

ಸೆಹೋರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಜ್ಞಾ ಸಿಂಗ್ ಠಾಕೂರ್, "ನಾವು ಸಂಸದರಾಗಿ ಆಯ್ಕೆಯಾಗಿರುವುದು ಚರಂಡಿ ಮತ್ತು ಟಾಯ್ಲೆಟ್ ಗಳನ್ನು ಕ್ಲೀನ್ ಮಾಡುವುದಕ್ಕಲ್ಲ. ಅರ್ಥವಾಯಿತಾ? ನಾನು ಆಯ್ಕೆಯಾಗಿರುವುದು ಯಾವ ಕೆಲಸ ಮಾಡುವುದಕ್ಕೆ ಎಂಬುದು ನನಗೆ ಗೊತ್ತು, ನಾನು ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ" ಎಂದು ಪ್ರಜ್ಞಾ ಸಿಂಗ್ ಹೇಳಿಕೆ ನೀಡಿದ್ದರು.

BJP warns Pragya Singh Thakur for controversial statement

ಪ್ರಧಾಣಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಎಂದು ಪೊರಕೆ ಹಿಡಿದು ರಸ್ತೆಗಿಳಿದರೆ, ಪ್ರಜ್ಞಾ ಸಿಂಗ್ ಅವರು ಇಂಥ ಹೇಳಿಕೆ ನೀಡುತ್ತಿರುವ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಗುರುವಿನ ಹೆಸರು ಬಳಕೆ: ಸಾಧ್ವಿ ಪ್ರಗ್ಯಾ ಪ್ರಮಾಣವಚನ ಸ್ವೀಕಾರಕ್ಕೆ ಅಡ್ಡಿ ಗುರುವಿನ ಹೆಸರು ಬಳಕೆ: ಸಾಧ್ವಿ ಪ್ರಗ್ಯಾ ಪ್ರಮಾಣವಚನ ಸ್ವೀಕಾರಕ್ಕೆ ಅಡ್ಡಿ

ಮಾಲೇಗಾಂವ್ ಸ್ಫೋಟದ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವ ಬಗ್ಗೆಯೂ ಸಾಕಷ್ಟು ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಅವರು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಭೋಪಾಲ್ ನಲ್ಲಿ ಗೆಲುವು ಸಾಧಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದ್ದರು.

English summary
BJP MP and Malegaon blast accused Pragya Singh Takhur's controversial statement, 'was not elected to get drains and toilets cleaned' becomes a matter of debate. Sources said, BJP warns her to not give to such statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X