ಬಾಸ್ಕೆಟ್ ಬಾಲ್ ಆಡಿದ ಪ್ರಗ್ಯಾ ಸಿಂಗ್ ವಿಡಿಯೋ ವೈರಲ್: ಅನೇಕ ಮಂದಿಗೆ ಆಶ್ಚರ್ಯ
ಭೋಪಾಲ್, ಜು. 03: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಭೋಪಾಲ್‌ನಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.
ಇತ್ತೀಚೆಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ಠಾಕೂರ್, ಭಾರೀ ಸರಳ, ಸುಲಭವಾಗಿ ಬಾಸ್ಕೆಟ್ ಬಾಲ್ ಅನ್ನು ಆಡುವುದನ್ನು ಈ ವೀಡಿಯೋದಲ್ಲಿ ನೋಡಬಹುದಾಗಿದೆ. ಕೆಲವು ಸ್ಥಳೀಯ ನಾಯಕರು ಮತ್ತು ಛಾಯಾಗ್ರಾಹಕರು ಜೊತೆಯಲ್ಲೇ ಇದ್ದ ಸಂದರ್ಭದಲ್ಲಿ ಪ್ರಗ್ಯಾ ಚೆಂಡನ್ನು ಸರಿಯಾಗಿ ಬಾಸ್ಕೆಟ್‌ಗೆ ಹಾಕುವಲ್ಲಿ ಸಫಲರಾಗಿ ಚಪ್ಪಾಳೆಗಿಟ್ಟಿಸಿಕೊಂಡಿದ್ದಾರೆ.
ಗುರುವಾರ, ಸಂಸದೆ ತೋಟಗಾರಿಕೆಗಾಗಿ ಶಕ್ತಿ ನಗರ ಪ್ರದೇಶದ ಬಾಸ್ಕೆಟ್ ಬಾಲ್ ಅಂಕಣಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅಂಕಣದಲ್ಲಿದ್ದ ಆಟಗಾರರನ್ನು ನೋಡಿ ಸಂಸದೆ ಕೂಡಾ ಒಂದು ಶಾಟ್ ಚೆಂಡು ಹೊಡೆಯುವ ನಿರ್ಧಾರ ಮಾಡಿದ್ದಾರೆ.

ಮಾರ್ಚ್‌ನಲ್ಲಿ ಪ್ರಗ್ಯಾ ಠಾಕೂರ್, ಉಸಿರಾಟದ ತೊಂದರೆಯ ಕಾರಣ ನವದೆಹಲಿಯಿಂದ ಮುಂಬೈಗೆ ತೆರಳಿದ್ದರು. ಒಂದು ತಿಂಗಳೊಳಗೆ ಎರಡನೇ ಬಾರಿಗೆ ಪ್ರಗ್ಯಾರನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಪರಿಸ್ಥಿತಿ ಬಂದಿತ್ತು. ಫೆಬ್ರವರಿ 19 ರಂದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಪ್ರಗ್ಯಾ ದಾಖಲಾಗಿದ್ದರು.
भोपाल की भाजपा सांसद साध्वी ठाकुर को अभी तक व्हील चेयर पर ही देखा था लेकिन आज उन्हें भोपाल में स्टेडीयम में बास्केट बॉल पर हाथ आज़माते देखा तो बड़ी ख़ुशी हुई…
— Narendra Saluja (@NarendraSaluja) July 1, 2021
अभी तक यही पता था कि किसी चोट के कारण वो ठीक से खड़ी और चल फिर भी नही सकती है…?
ईश्वर उन्हें हमेशा स्वस्थ रखे.. pic.twitter.com/UQrmsXkime
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ನ ನರೇಂದ್ರ ಸಲೂಜಾ, ''ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಠಾಕೂರ್ ಗಾಲಿ ಕುರ್ಚಿಯಲ್ಲೇ ಕೂತಿದ್ದನ್ನು ಇತ್ತೀಚೆಗೆ ನೋಡಿದ್ದೆ. ಆದರೆ ಇಂದು ಅವರು ಭೋಪಾಲ್‌ನ ಕ್ರೀಡಾಂಗಣದಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿದ್ದಾರೆ. ಇದನ್ನು ನೋಡಿ ಬಹಳ ಸಂತೋಷವಾಯಿತು,'' ಎಂದು ಹೇಳಿದ್ದಾರೆ.
''ಹಾಗೆಯೇ ಈವರೆಗೆ ನನಗೆ ಲಭಿಸಿದ ಮಾಹಿತಿ ಪ್ರಕಾರ ಯಾವುದೋ ಒಂದು ಗಾಯದ ಕಾರಣದಿಂದಾಗಿ ಪ್ರಗ್ಯಾ ಸರಿಯಾಗಿ ನಿಂತು ನಡೆಯಲು ಸಾಧ್ಯವಿಲ್ಲ ಎಂಬುದನ್ನು ತಿಳಿದಿತ್ತು. ದೇವರು ಅವರನ್ನು ಯಾವಾಗಲೂ ಆರೋಗ್ಯವಾಗಿರಿಸಲಿ,'' ಎಂದು ಹಾರೈಸಿದ್ದಾರೆ.
10 ಮಂದಿ ಸಾವನ್ನಪ್ಪಿ, ಅನೇಕರು ಗಾಯಗೊಂಡ 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಗ್ಯಾ ಸಿಂಗ್ ಆರೋಪಿಯಾಗಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 2017 ರಲ್ಲಿ ಆರೋಗ್ಯದ ಆಧಾರದ ಮೇಲೆ ಪ್ರಗ್ಯಾ ಸಿಂಗ್ ಜಾಮೀನು ಪಡೆದಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್‌ನಿಂದ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್‌ನನ್ನು 3.6 ಲಕ್ಷ ಮತಗಳಿಂದ ಪ್ರಗ್ಯಾ ಸೋಲಿಸಿದ್ದಾರೆ.
(ಒನ್‌ಇಂಡಿಯಾ ಸುದ್ದಿ)
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications