ಭೋಪಾಲ್‌ನಿಂದ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್
ಲಕ್ನೋ, ಏ.22: ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಮಂಗಳವಾರ ಭೋಪಾಲ್‌ನಿಂದ ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2019ರ ಲೋಕಸಭಾ ಚುನಾವಣೆಗೆ ಸಾಧ್ವಿ ಪ್ರಜ್ಞಾ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಸಂಜೆ ಅಥವಾ ಮಂಗಳವಾರ ಇನ್ನೂ ಇಬ್ಬರು ನಾಮಪತ್ರ ಸಲ್ಲಿಸಲಿದ್ದಾರೆ.
ಮಾಲೆಗಾವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಪ್ರಮುಖ ಆರೋಪಿಯಾಗಿದ್ದರು. ಇತ್ತೀಚೆಗೆ ಎನ್‌ಐಎ ಕೋರ್ಟ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶಿಸಿತ್ತು.ಯುಪಿಎ ಅವಧಿಯಲ್ಲಿ ಹಿಂದು ಭಯೋತ್ಪಾದನೆ ಎಂಬ ಶಬ್ದವನ್ನು ಹುಟ್ಟುಹಾಕಲಾಗಿತ್ತು. ಇದೀಗ ಪ್ರಜ್ಞಾ ಸಿಂಗ್ ಠಾಕೂರ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ.

2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದದ ಕಿಡಿ ಹೊತ್ತಿಸಿದ್ದರು. ಸಾಧ್ವಿ ಹೇಳಿಕೆಗೆ ಎಲ್ಲೆಡೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕೂಡಾ ಇದು ಅವರ ವಯಕ್ತಿಕ ಹೇಳಿಕೆ ಎಂದು ವಿವಾದತ ದೂರ ಉಳಿಯಲು ಯತ್ನಿಸಿತ್ತು ಬಳಿಕ ಹಿಂಪಡೆದಿದ್ದರು.












Click it and Unblock the Notifications