ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ ನಿಯಮ ಉಲ್ಲಂಘನೆ: ಶಿವರಾಜ್‌ಸಿಂಗ್ ಚೌಹಾಣ್ ವಿರುದ್ಧ ಪ್ರಕರಣ ದಾಖಲು

|
Google Oneindia Kannada News

ಇಂದೋರ್, ಅಕ್ಟೋಬರ್ 20: ಕೊವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ನಡೆಸಿದ ರೋಡ್‌ ಶೋ ವೇಳೆ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಬೆಂಗಳೂರು: 44 ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ರೋಗಿಗಳಿಂದ ಹಣ ವಸೂಲಿಬೆಂಗಳೂರು: 44 ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ರೋಗಿಗಳಿಂದ ಹಣ ವಸೂಲಿ

'ಕೆಲವೊಂದು ಷರತ್ತಿನಡಿ ರೋಡ್‌ ಶೋ ನಡೆಸಲು ಅನುಮತಿಯನ್ನು ನೀಡಲಾಗಿತ್ತು. ರೋಡ್‌ ಶೋ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿತ್ತು. ಅಲ್ಲದೇ ಕೇವಲ 5 ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

Case Against COVID-19 Norms Violation In MP CMs Poll Roadshow

'ರೋಡ್‌ ಶೋ ಸಂರ್ಭದಲ್ಲಿ 20 ರಿಂದ 25 ವಾಹನಗಳಿದ್ದವು. ಈ ವೇಳೆ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಅಲ್ಲದೇ ಹಲವರು ಮುಖಗವಸನ್ನು ಕೂಡ ಧರಿಸಿಲ್ಲ ಎಂದು ಚುನಾವಣಾಧಿಕಾರಿ ಪತ್ರದಲ್ಲಿ ಹೇಳಿದ್ದಾರೆ. ಹಾಗಾಗಿ ರೋಡ್‌ ಶೋಗೆ ಅನುಮತಿ ಪಡೆದ ದಿನೇಶ್‌ ಬನ್ಸವಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವೆಂಬರ್ 3 ರಂದು ಉಪಚುನಾವಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದೋರ್‌ನ ಸನ್ವೇರ್‌ ಪ್ರಾಂತ್ಯದಲ್ಲಿ ರೋಡ್‌ ಶೋ ನಡೆಸಿದ್ದರು.

Recommended Video

ಲಸಿಕೆ ಸಿಗತ್ತೋ ಇಲ್ವೋ ಗೊತ್ತಿಲ್ಲಾ ! ಆದ್ರೆ ಇದು ಮಾತ್ರ Ready ಇರ್ಬೇಕು | Oneindia Kannada

ಈ ವೇಳೆ ಕೋವಿಡ್‌ ಮಾರ್ಗಸೂಚಿಯನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರೊಬ್ಬರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

English summary
Police have registered a case of alleged violation of COVID-19 guidelines during a roadshow of Madhya Pradesh Chief Minister Shivraj Singh Chouhan in Indore''s Sanver area where an Assembly bypoll is scheduled on November 3, an official said on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X