ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಜನೇಯನ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ

|
Google Oneindia Kannada News

ಭೋಪಾಲ್‌, ಮೇ 17: ಮಧ್ಯಪ್ರದೇಶದ ನೀಮಚ್‌ ಜಿಲ್ಲೆಯಲ್ಲಿ ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಹಿನ್ನೆಲೆಯಲ್ಲಿ ನೀಮಚ್‌ ನಗರದಾದ್ಯಂತ ಸಿಆರ್ ಪಿಸಿ 144 ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನೀಮಚ್‌ ನಗರದ ಹಳೇ ಕೋರ್ಟ್ ಪ್ರದೇಶದಲ್ಲಿರುವ ದರ್ಗಾದಲ್ಲಿ ಕೆಲವು ವ್ಯಕ್ತಿಗಳ ಗುಂಪೊಂದು ಹನುಮಂತನ ಪ್ರತಿಮೆ ಸ್ಥಾಪಿಸಿದೆ. ಇದು ಎರಡು ಸಮುದಾಯಗಳ ನಡುವೆ ಮಾರಾಮಾರಿಗೆ ಮತ್ತು ಕಲ್ಲು ತೂರಾಟಕ್ಕೆ ಕಾರಣವಾಗಿದೆ. ಘರ್ಷಣೆಯನ್ನು ಹತೋಟಿಗೆ ತರಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಘಟನೆಯಲ್ಲಿ ಮೂರು ದಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗಾಯಾಳುಗಳ ಸಂಖ್ಯೆ ಬಗ್ಗೆ ಇದುವರೆಗೂ ವರದಿಯಾಗಿಲ್ಲ.

Clash between two groups over installation of Hanuman statue

ಘಟನೆ ಹಿನ್ನೆಲೆಯಲ್ಲಿ ನೀಮಚ್‌ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನೇಹಾ ಮೀನಾ ಅವರು, ಪೂರ್ವಾನುಮತಿಯಿಲ್ಲದೇ ಮೆರವಣಿಗೆ, ಧರಣಿ, ಸಭೆಗಳನ್ನು ಆಯೋಜಿಸಲು ಸಂಪೂರ್ಣ ನಿಷೇಧವನ್ನು ವಿಧಿಸಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

Clash between two groups over installation of Hanuman statue

ಅಲ್ಲದೇ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಅನುಮತಿ ಇಲ್ಲದೇ ಸಭೆ ಅಥವಾ ಸಮಾರಂಭ ಆಯೋಜಿಸುವಂತಿಲ್ಲ. ಅನುಮತಿಯಿಲ್ಲದೇ ಧ್ವನಿವರ್ಧಕಗಳ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

English summary
Section 144 imposed as two groups clash over Hanuman statue installation in Madhya pradesh,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X