ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ: ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

|
Google Oneindia Kannada News

ಭೋಪಾಲ್, ನವೆಂಬರ್ 25: ಮಧ್ಯಪ್ರದೇಶ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ಸಿನ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ಎಸ್ ಯುಐ)ದ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ.

ಭೋಪಾಲ್ ನಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಸಮರ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಅದಾಗ್ಯೂ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ನಿವಾಸದ ಬಳಿ ಹೊರಟ ಪ್ರತಿಭಟನಾಕಾರರನ್ನು ತಡೆಯುವುದಕ್ಕೆ ಸಾಧ್ಯವಾಗಲಿಲಲ್ಲ.

ಮುಂದಿನ ವರ್ಷ ಯಾವ್ಯಾವ ತರಗತಿಗೆ NEP ಪಠ್ಯ ಕ್ರಮ ಸಿಗಲಿದೆ ? 5+3+3+4 ಇದರ ಅಸಲಿ ಅರ್ಥಮುಂದಿನ ವರ್ಷ ಯಾವ್ಯಾವ ತರಗತಿಗೆ NEP ಪಠ್ಯ ಕ್ರಮ ಸಿಗಲಿದೆ ? 5+3+3+4 ಇದರ ಅಸಲಿ ಅರ್ಥ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ಸದಸ್ಯರಿಗೆ ವಿದ್ಯಾರ್ಥಿವೇತನ ಸಿಗುತ್ತಿಲ್ಲ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿನ ಇತರ ಲೋಪದೋಷಗಳ ಬಗ್ಗೆ ವಿದ್ಯಾರ್ಥಿಗಳು ದೂಷಿಸಿದ್ದಾರೆ. ರಾಜ್ಯದ ಎಲ್ಲಾ 52 ಜಿಲ್ಲೆಗಳಿಂದ ವಿದ್ಯಾರ್ಥಿಗಳು ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

Congress Students Wing NSUI clash with Police in Bhopal against the education policy of MP

ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್:

ಮೊದಲು ಬ್ಯಾರಿಕೇಡ್‌ನಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನಿಸಲಾಯಿತು. ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಅದಾಗ್ಯೂ, ಹೆಚ್ಚಿನ ಪ್ರತಿಭಟನಾಕಾರರು ಪೊಲೀಸರನ್ನು ತಪ್ಪಿಸಿಕೊಂಡು ಬ್ಯಾರಿಕೇಡ್‌ಗಳನ್ನು ದಾಟುವಲ್ಲಿ ಯಶಸ್ವಿಯಾಗಿರುವುದು ದೃಶ್ಯಗಳಲ್ಲಿ ಗೋಚರಿಸುತ್ತದೆ.

English summary
Congress Students' Wing NSUI clash with Police in Bhopal against the education policy of Madhya Pradesh. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X