ಕಾಂಗ್ರೆಸ್ ಸರ್ಕಾರವನ್ನು 10 ದಿನ ಕಾಪಾಡಿದ ಕೊರೊನಾ!
ಭೋಪಾಲ್, ಮಾರ್ಚ್ 16 : ಭಾರತ ಸೇರಿದಂತೆ ಪ್ರಪಂಚದ ವಿವಿಧ ದೇಶಗಳನ್ನು ಕಾಡುತ್ತಿರುವ ಕೊರೊನಾ ಕಾಂಗ್ರೆಸ್ ಸರ್ಕಾರವೊಂದನ್ನು ಉಳಿಸಿದೆ. ಹೌದು, ಮಧ್ಯಪ್ರದೇಶ ವಿಧಾನಸಭೆಯ ವಿಶ್ವಾಸಮತಯಾಚನೆ ಪ್ರಕ್ರಿಯೆಯನ್ನು ಹತ್ತು ದಿನಗಳ ಕಾಲ ಮುಂದೂಡಲಾಗಿದೆ.
22 ಶಾಸಕರ ರಾಜೀನಾಮೆ ಬಳಿಕ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಸೋಮವಾರ ಮುಖ್ಯಮಂತ್ರಿ ಕಮಲನಾಥ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕಿತ್ತು. ಆದರೆ, ವಿಧಾನಸಭೆ ಅಧಿವೇಶನ ಮುಂದೂಡಲಾಗಿದೆ.
ರಾಜ್ಯಪಾಲ ಲಾಲ್‌ಜಿ ಥಂಡನ್ ಮಧ್ಯಪ್ರದೇಶದ ವಿಧಾನಸಭೆ ಅಧಿವೇಶನವನ್ನು ಮಾರ್ಚ್ 26ಕ್ಕೆ ಮುಂದೂಡಿದರು. ಕೊರೊನಾ ಭೀತಿ ಹಿನ್ನಲೆಯ ವಿಧಾನಸಭೆ ಅಧಿವೇಶವನ್ನು 10 ದಿನಗಳ ಕಾಲ ಮುಂದೂಡಿದ್ದು, ಕಾಂಗ್ರೆಸ್ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ.
ಸೋಮವಾರ ಭೋಪಾಲ್‌ನಲ್ಲಿ ವಿಧಾನಸಭೆ ಅಧಿವೇಶನ ಆರಂಭವಾದರೂ 21 ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿಯೇ ಇದ್ದರು. 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು, 114 ಸದಸ್ಯ ಬಲವನ್ನು ಹೊಂದಿದ್ದ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ.

ರಾಜ್ಯಪಾಲರ ಭಾಷಣ
ಸೋಮವಾರ ಮಧ್ಯಪ್ರದೇಶ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಲಾಲ್‌ಜಿ ಥಂಡನ್ ಆಗಮಿಸಿದರು. ವಿಧಾನಸಭೆ ಅಧಿವೇಶನವನ್ನು 10 ದಿನಗಳ ಕಾಲ ಮುಂದೂಡಿದರು. "ಎಲ್ಲರೂ ಸಂವಿಧಾನದ ಪ್ರಕಾರ ಇರುವ ನಿಯಮಗಳನ್ನು ಪಾಲಿಸಬೇಕು. ರಾಜ್ಯದ ಘನತೆ ಕಾಪಾಡಬೇಕು" ಎಂದು ಕರೆ ನೀಡಿದರು. ಇದರಿಂದಾಗಿ ಕಮಲನಾಥ್ ಸರ್ಕಾರ ಹತ್ತು ದಿನಗಳ ಕಾಲ ಉಳಿಯಿತು.

ಕಮಲನಾಥ್ ಹಾಜರಿದ್ದರು
ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್, ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ವಿಧಾನಸಭೆಯಲ್ಲಿ ಹಾಜರಿದ್ದರು. ಸೋಮವಾರ ವಿಶ್ವಾಸಮತವನ್ನು ಸಾಬೀತು ಮಾಡಬೇಕು ಎಂದು ರಾಜ್ಯಪಾಲರು ಶನಿವಾರ ಕಮಲನಾಥ್‌ಗೆ ಸೂಚನೆ ಕೊಟ್ಟಿದ್ದರು.

ವಿಶ್ವಾಸಮತ ಕೇಳಬೇಕು
ಮಧ್ಯಪ್ರದೇಶ ವಿಧಾನಸಭೆ ಒಟ್ಟು ಸದಸ್ಯ ಬಲ 230. 22 ಶಾಸಕರ ರಾಜೀನಾಮೆ ಬಳಿಕ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಬಹುಮತ ಸಾಬೀತು ಪಡಿಸಲು 115 ಸದಸ್ಯ ಬಲ ಬೇಕು. ಕಾಂಗ್ರೆಸ್ ಶಾಸಕರ ಸಂಖ್ಯೆ 114 (22 ಶಾಸಕರ ರಾಜೀನಾಮೆ). ಬಿಜೆಪಿ 109 ಸದಸ್ಯ ಬಲವನ್ನು ಹೊಂದಿದೆ.

ಬೆಂಗಳೂರಿನಲ್ಲಿಯೇ ಇರುವ ಶಾಸಕರು
ಮಧ್ಯಪ್ರದೇಶದ 22 ಕಾಂಗ್ರೆಸ್ ಶಾಸಕರು ಬೆಂಗಳೂರಿನ ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ನಲ್ಲಿದ್ದರು. ಭಾನುವಾರ ಎಲ್ಲರೂ ರಮಡ ಹೋಟೆಲ್‌ಗೆ ವಾಸ್ತವ್ಯ ಬದಲಿಸಿದ್ದಾರೆ. ಇಂದು ವಿಧಾನಸಭೆ ಅಧಿವೇಶನವಿದ್ದರೂ ಶಾಸಕರು ಬೆಂಗಳೂರಿನಲ್ಲಿಯೇ ಇದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications