ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶದ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್‌ಗಳ ಕಳವು

|
Google Oneindia Kannada News

ಭೋಪಾಲ್, ಏಪ್ರಿಲ್ 21: ಕೊರೊನಾ ಸೋಂಕು ದೇಶದಲ್ಲಿ ವಿಪರೀತವಾದ ಬೆನ್ನಲ್ಲೇ ಆಮ್ಲಜನಕಕ್ಕೂ ಹಾಹಾಕಾರವೆದ್ದಿದೆ
.
ಬಹುತೇಕ ಕೊರೊನಾ ಸೋಂಕಿತರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದು, ಆಕ್ಸಿಜನ್ ಕೊರತೆ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗಲೇ ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಸಿಲಿಂಡರ್‌ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿರುವ ಘಟನೆ ವರದಿಯಾಗಿದೆ.

ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪನಿಯಿಂದ ರಾಜ್ಯದಲ್ಲಿ ದಿನಕ್ಕೆ 400 ಟನ್ ಆಮ್ಲಜನಕ ಪೂರೈಕೆ ‌ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪನಿಯಿಂದ ರಾಜ್ಯದಲ್ಲಿ ದಿನಕ್ಕೆ 400 ಟನ್ ಆಮ್ಲಜನಕ ಪೂರೈಕೆ ‌

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಸ್ಪತ್ರೆ ವರಿಷ್ಠಾಧಿಕಾರಿಗಳು, ಆಕ್ಸಿಜನ್ ಸಿಲಿಂಡರ್ ಗಳ ಲೂಟಿಯಾಗಿರುವುದು ನಿಜ, ಆದರೆ ಇದರಿಂದ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾಗಿಲ್ಲ. ಆಸ್ಪತ್ರೆಯಲ್ಲಿ ಸಾಕಷ್ಟು ಆಕ್ಸಿಜನ್ ಸಿಲಿಂಡರ್‌ಗಳ ದಾಸ್ತಾನಿದೆ.

Covid-19: Oxygen Cylinders Looted At Madhya Pradesh Hospital, Twice In Two Days

ಹೀಗಾಗಿ ರೋಗಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಅಂತೆಯೇ ಆಕ್ಸಿಜನ್ ಸಿಲಿಂಡರ್‌ಗಳ ಲೂಟಿ ಸಂಬಂಧ ಪೊಲೀಸ್ ದೂರು ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ದೋಮಾ ಜಿಲ್ಲಾಧಿಕಾರಿಗಳು, ಆಕ್ಸಿಜನ್ ಟ್ರಕ್ ಬಂದ ಕೂಡಲೇ ದುಷ್ಕರ್ಮಿಗಳು ಸಿಲಿಂಡರ್ ಗಳನ್ನು ಲೂಟಿ ಮಾಡಿದ್ದಾರೆ. ಈ ಬಗ್ಗೆ ಸ್ಥಳೀಯರು ಆರೋಪಿಗಳನ್ನು ಗುರುತಿಸಿದ್ದು, ಈ ಸಂಬಂಧ ಪ್ರಕರಣ ಕೂಡ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದ ದಾಮೋ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ತರಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ವೈದ್ಯಕೀಯ ಆಮ್ಲಜನಕ ಸಿಲಿಂಡರ್‌ಗಳನ್ನು ಹೊಂದಿರುವ ಟ್ರಕ್ ಜಿಲ್ಲಾಸ್ಪತ್ರೆ ತಲುಪುತ್ತಿದ್ದಂತೆಯೇ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಸಿಲಿಂಡರ್ ಗಳನ್ನು ಹೊತ್ತು ಪರಾರಿಯಾಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

English summary
On a day when the Madhya Pradesh government claimed it had a surplus supply of oxygen, shocking visuals of people ransacking the oxygen storeroom and looting cylinders from Damoh district hospital have emerged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X