just in: ಧರ್ಮ ತಿಳಿಯಲು ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ
ಭೋಪಾಲ್, ಆಗಸ್ಟ್ 08: ಕಳ್ಳತನದ ಶಂಕೆಯ ಮೇಲೆ ದಲಿತ ವ್ಯಕ್ತಿಯೊಬ್ಬನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯ ಧರ್ಮ ತಿಳಿಯಲು ದಲಿತ ಯುವಕನ ಬಟ್ಟೆಯನ್ನು ಕಿತ್ತೆಸೆದು ಅವಮಾನ ಮಾಡಿದ್ದಾರೆ.
ಗುಂಪಿನಿಂದ ಹಲ್ಲೆಗೊಳಗಾದ ವ್ಯಕ್ತಿಯನ್ನು ಆದಿತ್ಯ ರೋಕ್ಡೆ ಎಂದು ಗುರುತಿಸಲಾಗಿದ್ದು, ಆಗಸ್ಟ್ 3 ರಂದು ಖಾರ್ಗೋನ್ ಜಿಲ್ಲೆಯಿಂದ 70 ಕಿಮೀ ದೂರದಲ್ಲಿರುವ ಕೈಗಾರಿಕಾ ಪ್ರದೇಶವಾದ ನಿಮ್ರಾಣಿ ಬಳಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆ ಬೆಳಕಿಗೆ ಬಂದ ನಂತರ ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ, ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸೆಕ್ಷನ್‌ಗಳ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಪೊಲೀಸರಿಗೆ ಆಗಸ್ಟ್ 6 ರಂದು ಮಾಹಿತಿ ಸಿಕ್ಕಿತು. ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಖಾರ್ಗೋನ್ ಜಿಲ್ಲೆಯ ಪೊಲೀಸ್ ಅಧೀಕ್ಷಕ (ಎಸ್‌ಪಿ) ಧರ್ಮವೀರ್ ಸಿಂಗ್ ಯಾದವ್ ಹೇಳಿದ್ದಾರೆ.
ಘಟನೆಯಲ್ಲಿ ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವ ಬದಲು ದಲಿತ ವ್ಯಕ್ತಿಯನ್ನು ಖಾಲ್ತಂಕ ಪೊಲೀಸರು ಜೈಲಿಗೆ ಹಾಕಿದ್ದರು. ಇದರಿಂದ ಖಾಲ್ತಂಕಾ ಪೊಲೀಸ್ ಹೊರಠಾಣೆ ಪ್ರಭಾರಿ ರಾಜೇಂದ್ರ ಸಿಂಗ್ ಬಘೇಲ್ ವಿರುದ್ಧ ತನಖೆಗೆ ಆದೇಶಿಸಲಾಗಿದೆ.
ಕೆಲಸದ ಮೇಲೆ ಖಾಲ್‌ಘಾಟ್‌ಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ನನ್ನ ಮಗನ ಮೇಲೆ ಹಲ್ಲೆ ಮಾಡಲಾಗಿದೆ. ಆತ ಹಿಂದೂವೋ, ಮುಸಲ್ಮಾನನೋ ಎಂದು ಪರೀಕ್ಷಿಸಲು ಆತನನ್ನು ಬೆತ್ತಲು ಮಾಡಿದ್ದಾರೆ. ಸ್ಥಳದಲ್ಲಿ ಪೊಲೀಸರಿದ್ದರೂ ಕೂಡ ಮಗನ ಸಹಾಯಕ್ಕೆ ಬರಲಿಲ್ಲ ಎಂದು ಸಂತ್ರಸ್ತನ ತಾಯಿ ಭಗವತಿ ರೊಕ್ಡೆ ಆರೋಪಿಸಿದ್ದಾರೆ.
ಆದರೆ, ಹಲ್ಲಗೊಳಗಾದ ಆದಿತ್ಯ ರೊಕ್ಡೆಯನ್ನು ಕಳ್ಳತನ ಮಾಡಿರುವ ಶಂಕೆಯ ಮೇಲೆ ಥಳಿಸಲಾಗಿದೆಯೇ ಹೊರತು ಆತನ ಧರ್ಮದ ಹಿನ್ನೆಲೆಯಲ್ಲಿ ಅಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications