ಮಾನಹಾನಿ ಪ್ರಕರಣ: ಮಮತಾ ಬ್ಯಾನರ್ಜಿ ಅಳಿಯನಿಗೆ ಸಮನ್ಸ್ ಜಾರಿ ಮಾಡಿದ ಭೋಪಾಲ್ ಕೋರ್ಟ್
ಭೋಪಾಲ್, ಏಪ್ರಿಲ್ 1: ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗಿಯ ಪುತ್ರ, ಶಾಸಕ ಆಕಾಶ್ ವಿಜಯವರ್ಗಿಯ ಅವರು ಸಲ್ಲಿಸಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 1 ರಂದು ತನ್ನ ಮುಂದೆ ಹಾಜರಾಗುವಂತೆ ಮಧ್ಯಪ್ರದೇಶದ ಭೋಪಾಲ್ ನ್ಯಾಯಾಲಯ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸಮನ್ಸ್ ಜಾರಿಗೊಳಿಸಿದೆ.
ದೂರುದಾರ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ ನಂತರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯ ಅಭಿಷೇಕ್ ಬ್ಯಾನರ್ಜಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಆಕಾಶ್ ವಿಜಯವರ್ಗಿಯ ಪರ ವಕೀಲ ಶ್ರೇಯರಾಜ್ ಸಕ್ಸೇನಾ ತಿಳಿಸಿದ್ದಾರೆ.
"ದೂರುದಾರ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ ನಂತರ, ನ್ಯಾಯಾಲಯವು ಅಭಿಷೇಕ್ ಬ್ಯಾನರ್ಜಿ ಅವರಿಗೆ ಮೇ 1ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ಮಾನಹಾನಿ ಪ್ರಕರಣವನ್ನು 2020ರ ಡಿಸೆಂಬರ್‌ನಲ್ಲಿ ಸಿಜೆಎಂ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ಶ್ರೇಯರಾಜ್ ಸಕ್ಸೇನಾ ಹೇಳಿದರು.

"ನವೆಂಬರ್ 25, 2020 ರಂದು ಡೈಮಂಡ್ ಹಾರ್ಬರ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಚುನಾವಣೆಗೆ ಮುಂಚಿತವಾಗಿ ಕಾನೂನು ಬಾಹಿರವಾಗಿ ರಾಜಕೀಯ ಮೈಲೇಜ್ ಪಡೆಯಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರನ್ನು ಹೊರಗಿನವನೆಂದು ಬಣ್ಣಿಸಿದ್ದರು. ಅಲ್ಲದೆ ಅವರ ಪುತ್ರ ಆಕಾಶ್ ವಿಜಯವರ್ಗಿಯ ಅವರನ್ನು ಗೂಂಡಾ ಎಂದಿದ್ದರು ಎಂದು ದೂರು ನೀಡಲಾಗಿದೆ.
ಕೈಲಾಶ್ ವಿಜಯವರ್ಗಿಯ ಅವರ ಪುತ್ರ ಆಕಾಶ್ ವಿಜಯವರ್ಗಿಯಾ ಅವರು ಮಧ್ಯಪ್ರದೇಶದ ಇಂದೋರ್-3 ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಇಂದು ಪಶ್ಚಿಮ ಬಂಗಾಳದ ಹೈ-ವೋಲ್ಟೇಜ್ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.
Recommended Video
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications