ಭೋಪಾಲ್‌: ಕೊರೊನಾಕ್ಕೆ ಆರೋಗ್ಯ ಇಲಾಖೆಯೇ ಹಾಟ್ ಸ್ಪಾಟ್!

ಭೋಪಾಲ್, ಏಪ್ರಿಲ್ 07 : ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಆರೋಗ್ಯ ಇಲಾಖೆಯ ಕಚೇರಿಯೇ ಕೊರೊನಾ ಸೋಂಕು ಹರಡಲು ಹಾಟ್ ಸ್ಪಾಟ್ ಆಗಿದೆ. ಇದುವರೆಗೂ ಇಲಾಖೆಯ 15 ಅಧಿಕಾರಿಗಳಿಗೆ ಸೋಂಕು ತಗುಲಿದ್ದು, ಆತಂಕಕ್ಕೆ ಕಾರಣವಾಗಿದೆ.

Recommended Video

      ಯಡಿಯೂರಪ್ಪನವರು ಉಪವಾಸ ಮಾಡಿದ ಕಾರಣವೇನು ? | Yediyurappa | CM | Oneindia Kannada

      ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ಖಚಿತವಾಗಿದೆ. ಇಲಾಖೆಯ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಸೋಂಕು ತಗುಲಿರುವುದು ಕೆಲವು ದಿನಗಳ ಹಿಂದೆ ತಿಳಿದು ಬಂದಿತ್ತು.

      ಪ್ರಧಾನ ಕಾರ್ಯದರ್ಶಿ, ನಿರ್ದೇಶಕರು, ಜಂಟಿ ನಿರ್ದೇಶಕರು, ನಾಲ್ವರು ಸಹಾಯಕ ನಿರ್ದೇಶಕರು ಸೇರಿದಂತೆ ಇಲಾಖೆಯ 15 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇಲಾಖೆಯ ಇನ್ನೂ ಹಲವು ಸಿಬ್ಬಂದಿಗಳ ಸ್ಯಾಂಪಲ್ ಪರೀಕ್ಷೆಗೆ ಕಳಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

      Directorate Of Health Dept Bhopal Biggest Hot Spot For Covid 19

      ಇಲಾಖೆಯ 150 ಕ್ಕೂ ಅಧಿಕ ಸಿಬ್ಭಂದಿ ಸ್ವಯಂ ಕ್ವಾರಂಟೈನ್‌ನಲ್ಲಿದ್ದಾರೆ. ಇದರಿಂದಾಗಿ ಇಲಾಖೆಯಲ್ಲಿ ಸ್ಥಾಪನೆ ಮಾಡಿದ್ದ ಸಹಾಯವಾಣಿ ಸಹ ಕೆಲಸ ಮಾಡುತ್ತಿಲ್ಲ ಎಂದು ಹೆಸರು ಹೇಳಲು ಇಚ್ಛಿಸಿದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

      ಆರೋಗ್ಯ ಇಲಾಖೆ ಅಧಿಕಾರಿಗಳು ಅಪ್ಲಿಕೇಶನ್‌ಗಳು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗಳನ್ನು ಮಾಡುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿರುವ ಅಧಿಕಾರಿಗಳು ಸಹ ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆಗಳನ್ನು ನೀಡುತ್ತಿದ್ದು, ಇಲಾಖೆಯ ಕೆಲಸವನ್ನು ಮಾಡುತ್ತಿದ್ದಾರೆ.

      ಸರ್ಕಾರ ಆರೋಗ್ಯ ಇಲಾಖೆಯ ಸ್ಥಿತಿಯ ಬಗ್ಗೆ ಸರಿಯಾಗಿ ಗಮನಹರಿಸುತ್ತಿಲ್ಲ. ಕೇಂದ್ರ ಆರೋಗ್ಯ ಸಚಿವಾಲಯದಿಂದ ಬರುವ ನಿರ್ದೇಶನಗಳು ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ಆರೋಪಗಳು ಕೇಳಿ ಬರುತ್ತಿವೆ.

      ಇಂದೋರ್‌ಗೆ ಭೇಟಿ ನೀಡಿದ್ದ ಇಲಾಖೆಯ ಹಲವು ಅಧಿಕಾರಿಗಳು ಕಚೇರಿಗೆ ವಾಪಸ್ ಬರದೆ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇಂದೋರ್‌ನಲ್ಲಿ ಸೋಮವಾರ ಸಂಜೆಯ ತನಕ 256 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣ ಇಲ್ಲಿಯೇ ದಾಖಲಾಗಿದೆ.

      ಭಾನುವಾರ ಸರ್ಕಾರ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಯಾವುದೇ ಕೊರತೆ ಉಂಟಾಗಿಲ್ಲ ಎಂದು ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+