Get Updates
Get notified of breaking news, exclusive insights, and must-see stories!

ಹೇಮಂತ್ ಕರ್ಕರೆ ಸಾವಿನ ಕುರಿತ ವಿವಾದಿತ ಹೇಳಿಕೆ: ಪ್ರಜ್ಞಾ ಸಿಂಗ್‌ಗೆ ನೋಟಿಸ್

ಭೋಪಾಲ್, ಏ.20: ಎಸ್‌ಟಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಸಾವಿನ ಕುರಿತ ಹೇಳಿಕೆಗೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಜ್ಞಾ ಸಿಂಗ್‌ಗೆ ಚುನಾವಣಾ ಆಯೋಗ ನೋಟಿಸ್ ಜಾರಿಮಾಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದ ಹುಟ್ಟಿಸಿದ್ದರು.

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆ (ಎಡಿಎಸ್) ಅಧಿಕಾರಿಯಾಗಿದ್ದ ಹೇಮಂತ್ ಕರ್ಕರೆ ಅವರು 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಅವರೊಂದಿಗೆ ಇನ್ನಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಮೃತಪಟ್ಟಿದ್ದರು. ಹೇಮಂತ್ ಕರ್ಕರೆ ಅವರ ತನಿಖೆಯ ಕಾರಣದಿಂದಲೇ ಸಾಧ್ವಿ ಪ್ರಜ್ಞಾ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಸೇರುವಂತಾಗಿತ್ತು.

EC to issue notice to Pragya Thakur on her remarks against Hemant Karkare

ಪ್ರಜ್ಞಾ ಸಿಂಗ್ ಅವರ ಹೇಳಿಕೆಗೆ ಭಾರಿ ವಿವಾದ ವ್ಯಕ್ತವಾಗಿತ್ತು. ಇದೀಗ ವಿವಾದಿತ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. 2008ರ ಸೆಪ್ಟೆಂಬರ್‌ 29ರಂದು ನಡೆದ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಸತ್ತು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ನಿಮ್ಮ ರಾಜಕೀಯ ಜ್ಞಾನವನ್ನು ಒರೆಗೆ ಹಚ್ಚುವ ರಸಪ್ರಶ್ನೆ

ಹಿಂದೂ ಭಯೋತ್ಪಾದನಾ ಸಂಘಟನೆ ಈ ದಾಳಿ ನಡೆಸಿದೆ ಎಂದು ಆರೋಪಿಸಿದ್ದ ಮಹಾರಾಷ್ಟ್ರ ಎಟಿಎಸ್, ಸಾಧ್ವಿ ಮತ್ತು ಇತರರನ್ನು ಬಂಧಿಸಿತ್ತು. 2016ರ ಮೇ ತಿಂಗಳಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸಾಧ್ವಿಗೆ ಕ್ಲೀನ್ ಚಿಟ್ ನೀಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+