Breaking: ಮಧ್ಯಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 10 ಸಾವು
ಭೂಪಾಲ್, ಆ.01: ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಎಂಟು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು 10 ರೋಗಿಗಳ ಸಾವಿಗೆ ಕಾರಣವಾಗಿದೆ.
Fire broke out in Jabalpur hospital. 6 people died in this fire in ICU. People were being treated in ICO. Many people came in the grip of fire. The death toll is feared to increase. @drmjabalpur @IGP_Jabalpur_MP @ChouhanShivraj pic.twitter.com/3utDctRdo9
— BHARAT GHANDAT (@BHARATGHANDAT2) August 1, 2022
ಸ್ಥಳೀಯರ ಪ್ರಕಾರ, ಹಲವಾರು ಅಗ್ನಿಶಾಮಕ ತಂಡಗಳು ಸ್ಥಳದಲ್ಲಿದ್ದು ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿವೆ.

ಜಬಲ್‌ಪುರದಲ್ಲಿರುವ ನ್ಯೂ ಲೈಫ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ಕೌನ್ಸಿಲರ್ ಹೇಳಿದರು.
ಘಟನೆ ಸಂಭವಿಸಿರುವ ಜಬಲ್‌ಪುರದ ಶಿವನಗರ ದಾಮೋಹ್ ನಾಕಾ ಬಳಿ ಇರುವ ನ್ಯೂ ಲೈಫ್ ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ವರದಿಗಳು ಹೇಳಿವೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.












Click it and Unblock the Notifications