ಕೊರೊನಾದಿಂದ ಚೇತರಿಸಿಕೊಂಡಿದ್ದ ವ್ಯಕ್ತಿಯಲ್ಲಿ "ಹಸಿರು ಶಿಲೀಂಧ್ರ" ಪತ್ತೆ
ಇಂದೋರ್, ಜೂನ್ 16: ಕಪ್ಪು, ಬಿಳಿ, ಯೆಲ್ಲೋ ಫಂಗಸ್ ನಂತರ ಇದೀಗ ಗ್ರೀನ್ ಫಂಗಸ್ ಸೋಂಕಿನ ಪ್ರಕರಣವೊಂದು ಕಾಣಿಸಿಕೊಂಡಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ 34 ವರ್ಷದ ವ್ಯಕ್ತಿಯೊಬ್ಬರಲ್ಲಿ ಹಸಿರು ಶಿಲೀಂಧ್ರ ಸೋಂಕು (Green fungus) ಪತ್ತೆಯಾಗಿದೆ.
"ಮಧ್ಯ ಪ್ರದೇಶದ ಇಂದೋರ್‌ನ ವ್ಯಕ್ತಿಯಲ್ಲಿ ಹಸಿರು ಶಿಲೀಂಧ್ರ ಸೋಂಕು ಪತ್ತೆಯಾಗಿದೆ. ಈ ಗ್ರೀನ್ ಫಂಗಸ್ ಅನ್ನು ವೈದ್ಯಕೀಯ ಭಾಷೆಯಲ್ಲಿ ಆಸ್ಪರ್ಗಿಲ್ಲೋಸಿಸ್ (Aspergillosis) ಎಂದು ಕರೆಯಲಾಗುತ್ತದೆ," ಎಂದು ಅರಬಿಂದೋ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವಿಭಾಗದ ವೈದ್ಯ ಡಾ. ರವಿ ದೋಸಿ ತಿಳಿಸಿದ್ದಾರೆ.
ರೋಗಿಯನ್ನು ತಕ್ಷಣವೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಜ್ವರ, ಮೂಗಿನಿಂದ ರಕ್ತಸ್ರಾವವಾಗುತ್ತಿತ್ತು. ಇದು ಮ್ಯೂಕರ್ ಮೈಕೋಸಿಸ್ (ಕಪ್ಪು ಶಿಲೀಂಧ್ರ) ಇರಬಹುದೆಂಬ ಶಂಕೆಯಿಂದ ಪರೀಕ್ಷೆ ಮಾಡಿಸಿದ್ದಾರೆ. ಆಗ ಹಸಿರು ಶಿಲೀಂಧ್ರ ಸೋಂಕು ದೃಢಪಟ್ಟಿದೆ. ವ್ಯಕ್ತಿಯ ಶ್ವಾಸಕೋಶ ಹಾಗೂ ರಕ್ತದಲ್ಲಿ ಈ ಹಸಿರು ಶಿಲೀಂಧ್ರ ಕಂಡುಬಂದಿದೆ.
ರೋಗಿಯು ಎರಡು ತಿಂಗಳ ಮುನ್ನ ಕೊರೊನಾ ಸೋಂಕಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿದ್ದು, ಸುಮಾರು ಒಂದು ತಿಂಗಳ ಕಾಲ ಐಸಿಯುನಲ್ಲಿದ್ದರು. ಗುಣಮುಖರಾಗಿ ಮನೆಗೆ ತೆರಳಿದ ನಂತರ ಮೂಗಿನಲ್ಲಿ ರಕ್ತಸ್ರಾವವಾಗಿ ಅಧಿಕ ಜ್ವರ ಕಾಣಿಸಿಕೊಂಡಿತ್ತು. ಕೆಲವೇ ದಿನಗಳಲ್ಲಿ ತೂಕದಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಇದರಿಂದ ಆತಂಕಗೊಂಡು ಪರೀಕ್ಷೆ ನಡೆಸಿದಾಗ ಹಸಿರು ಶಿಲೀಂಧ್ರ ಇರುವುದು ಕಂಡುಬಂದಿದೆ.
"ಹಸಿರು ಶಿಲೀಂಧ್ರ ಸೋಂಕು ಹಾಗೂ ಅದರ ಪರಿಣಾಮದ ಕುರಿತು ಇನ್ನಷ್ಟು ಸಂಶೋಧನೆಗಳು ನಡೆಯಬೇಕಿದೆ. ಕೊರೊನಾಗೂ ಈ ಶಿಲೀಂಧ್ರ ಸೋಂಕಿಗೂ ಇರುವ ನಂಟಿನ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಬೇಕಿದೆ," ಎಂದು ವೈದ್ಯ ರವಿ ದೋಸಿ ಹೇಳಿದ್ದಾರೆ.
-
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications