ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೋಪಾಲ್ ಬೆಂಕಿ ಅವಘಡ: NOC ಪಡೆದುಕೊಂಡಿರಲಿಲ್ಲ ಕಮಲಾ ನೆಹರು ಆಸ್ಪತ್ರೆ!

|
Google Oneindia Kannada News

ಭೋಪಾಲ್, ನವೆಂಬರ್ 9: ಭೋಪಾಲ್‌ನ ಕಮಲಾ ನೆಹರು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡು 4 ಶಿಶುಗಳ ಪ್ರಾಣ ಬಿಟ್ಟಿವೆ. ಈ ಆಸ್ಪತ್ರೆಯು ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆದುಕೊಂಡಿರಲಿಲ್ಲ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಮಲಾ ನೆಹರು ಆಸ್ಪತ್ರೆಯು ಯಾವುದೇ ಅಗ್ನಿಶಾಮಕ ಇಲಾಖೆಯಿಂದ ಎನ್‌ಒಸಿಗೆ ಅರ್ಜಿ ಸಲ್ಲಿಸಿರಲಿಲ್ಲ. ಆಸ್ಪತ್ರೆಯಲ್ಲಿನ ಎಲ್ಲಾ ಅಗ್ನಿಶಾಮಕ ಉಪಕರಣಗಳು ನಿಷ್ಕ್ರಿಯ ಸ್ಥಿತಿಯಲ್ಲಿದ್ದವು ಎಂದು ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ನ ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Breaking: ಭೋಪಾಲ್‌ನ ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡBreaking: ಭೋಪಾಲ್‌ನ ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ

"ಕಳೆದ ಸೋಮವಾರ ತಡರಾತ್ರಿ ವೇಳೆ ಆಸ್ಪತ್ರೆಯ ಸಾಮಾನ್ಯ ವಾರ್ಡ್ ಮತ್ತು ಎನ್‌ಐಸಿಯು ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ವಾರ್ಡ್‌ನಲ್ಲಿದ್ದ 40 ಶಿಶುಗಳ ಪೈಕಿ 36 ಶಿಶುಗಳನ್ನು ರಕ್ಷಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ," ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bhopal Hospital Where 4 Infants Died Due To Blaze Never Applied For NOC: Report

ಉನ್ನತ ಮಟ್ಟದ ತನಿಖೆಗೆ ಆದೇಶಿಸಲು ಆಗ್ರಹ:

ಕಳೆದ ನವೆಂಬರ್ 8ರ ಸೋಮವಾರ ರಾತ್ರಿ ಭೋಪಾಲ್‌ನ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ವಿಶೇಷ ನವಜಾತ ಆರೈಕೆ ಘಟಕದಲ್ಲಿ (ಎಸ್‌ಎನ್‌ಸಿಯು) ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ನಾಲ್ಕು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಎಸ್‌ಎನ್‌ಸಿಯುಗೆ ಒಟ್ಟು 40 ಮಕ್ಕಳು ದಾಖಲಾಗಿದ್ದರು. ಈ ಪೈಕಿ 36 ಮಂದಿ ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಮಲಾ ನೆಹರು ಮಕ್ಕಳ ಆಸ್ಪತ್ರೆ ಹಮೀಡಿಯಾ ಆಸ್ಪತ್ರೆಯ ಭಾಗವಾಗಿದ್ದು, ಇದು ರಾಜ್ಯದ ಅತಿದೊಡ್ಡ ಸರ್ಕಾರಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲೇ ಒಂದಾಗಿದೆ.

ಆಸ್ಪತ್ರೆ ಸಿಬ್ಬಂದಿ ಪರಾರಿಯಾಗಿರುವ ಬಗ್ಗೆ ಆರೋಪ:

ಭೋಪಾಲ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿದ್ದರಿಂದ ಆತಂಕಗೊಂಡ ಪೋಷಕರು ತಮ್ಮ ಮಕ್ಕಳನ್ನು ಹುಡುಕಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂತು. ಈ ಮಧ್ಯೆ ಮಕ್ಕಳನ್ನು ರಕ್ಷಿಸುವ ಬದಲು ಆಸ್ಪತ್ರೆಯ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂದು ಸಿಟ್ಟಿಗೆದ್ದ ಕೆಲ ಪೋಷಕರು ಆರೋಪಿಸಿದ್ದಾರೆ. ಕೆಲವು ಪೋಷಕರು ತಮ್ಮ ಮಗುವನ್ನು ಹುಡುಕುತ್ತಿರುವಾಗ, ಇನ್ನೂ ಕೆಲವರು ತಮ್ಮ ಮಕ್ಕಳೊಂದಿಗೆ ಆಸ್ಪತ್ರೆಯಿಂದ ಹೊರಗೆ ಜಿಗಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಆಸ್ಪತ್ರೆಯ ಒಳಭಾಗ ಸಂಪೂರ್ಣ ಹೊಗೆಯಿಂದ ಆವೃತವಾಗಿತ್ತು ಎಂದು ಆಸ್ಪತ್ರೆಯೊಳಗಿದ್ದ ಮಹಿಳೆಯೊಬ್ಬರು ಹೇಳಿದ್ದಾರೆ.

ಸೋಮವಾರ ಘಟನೆ ನಡೆದ ಸಮಯದ ಮಾಹಿತಿ:

"ಭೋಪಾಲ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕವಿರುವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ವಿಷಯ ತಿಳಿಯುತ್ತಿದ್ದಂತೆ ರಾತ್ರಿ 10 ಗಂಟೆ ಸುಮಾರಿಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಶುರು ಮಾಡಿತು. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು," ಎಂದು ಫತೇಘರ್ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬೇರ್ ಖಾನ್ ಹೇಳಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ:

ಸೋಮವಾರ ಕಮಲಾ ನೆಹರು ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ. ವಾರ್ಡ್‌ನೊಳಗಿನ ಪರಿಸ್ಥಿತಿ "ತುಂಬಾ ಭಯಾನಕ" ಎಂದು ಅವರು ವಿವರಿಸಿದ್ದಾರೆ. "ಶಾರ್ಟ್ ಸರ್ಕ್ಯೂಟ್‌ನಿಂದ ವಿಶೇಷ ನವಜಾತ ಶಿಶು ಆರೈಕೆ ಘಟಕ (ಎಸ್‌ಎನ್‌ಸಿಯು) ವಾರ್ಡ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾವು ಇತರರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದೆವು. ವಾರ್ಡ್ ಒಳಗೆ ಕತ್ತಲು ಆವರಿಸಿತ್ತು. ಮಕ್ಕಳನ್ನು ಪಕ್ಕದ ವಾರ್ಡ್‌ಗೆ ಸ್ಥಳಾಂತರಿಸಲಾಯಿತು ಎಂದು ಸಾರಂಗ್ ಹೇಳಿದ್ದಾರೆ.

Recommended Video

ಇಂಡೋ-ಪಾಕ್ ಪಂದ್ಯವನ್ನು ಎಷ್ಟು ಮಂದಿ ನೋಡಿದ್ದಾರೆ?ಕ್ರಿಕೆಟ್ ಇತಿಹಾಸದ ಹೊಸ ದಾಖಲೆ | Oneindia Kannada

English summary
Bhopal Hospital Where 4 Infants Died Due To Blaze Never Applied For NOC: Report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X