ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶವೇ ಮಾದರಿ: ಇತರೆ ರಾಜ್ಯಗಳು ನೋಡಿ ಕಲಿಯಬೇಕಾಗಿದ್ದೇನು?

|
Google Oneindia Kannada News

ಭೋಪಾಲ್, ಜೂನ್ 22: ಮಧ್ಯಪ್ರದೇಶ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮಾದರಿ ಎನಿಸಿದೆ. ಇಡೀ ದೇಶದಲ್ಲಿ 80 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಿದ್ದು, ಈ ಪೈಕಿ ಶೇ.20ರಷ್ಟು ಲಸಿಕೆ ಮಧ್ಯಪ್ರದೇಶದಲ್ಲಿ ವಿತರಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲೇ ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳ ಪಟ್ಟಿಯಲ್ಲಿ ಮಧ್ಯಪ್ರದೇಶ ಅಗ್ರ ಸ್ಥಾನದಲ್ಲಿದೆ.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಬೇಕು ಎಂಬ ಕೇಂದ್ರ ಸರ್ಕಾರದ ಹೊಸ ನೀತಿಯ ಅನುಸಾರ ಲಸಿಕೆ ನೀಡಲಾಗಿದೆ. ಮಧ್ಯಪ್ರದೇಶದಲ್ಲಿ ಸೋಮವಾರ ರಾತ್ರಿ 9 ಗಂಟೆ ವೇಳೆಗೆ 16.41 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಹೊಸ ದಾಖಲೆ: ಭಾರತದಲ್ಲಿ ಒಂದೇ ದಿನ 80 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ!ಹೊಸ ದಾಖಲೆ: ಭಾರತದಲ್ಲಿ ಒಂದೇ ದಿನ 80 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ!

ರಾಜ್ಯದಲ್ಲಿ ಪ್ರತಿನಿತ್ಯ 10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಹೊಸ ನೀತಿ ಅನುಸಾರ ಅತಿಹೆಚ್ಚು ಜನರಿಗೆ ಲಸಿಕೆ ವಿತರಿಸುವಲ್ಲಿ ಮಧ್ಯ ಪ್ರದೇಶ ಮಾದರಿ ಎನಿಸಿಕೊಳ್ಳುವುದಕ್ಕೆ ರಾಜ್ಯ ಸರ್ಕಾರದ ಕೆಲವು ನಡೆಗಳೇ ಕಾರಣವಾಗಿದೆ. ಕೊವಿಡ್-19 ಲಸಿಕೆ ವಿತರಣೆಯಲ್ಲಿ ಇತರೆ ರಾಜ್ಯಗಳಿಗೆ ಮಧ್ಯ ಪ್ರದೇಶ ಮಾದರಿ ಆಗಿದ್ದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ.

7,000 ಕೊರೊನಾವೈರಸ್ ಲಸಿಕೆ ವಿತರಣೆ ಕೇಂದ್ರ ಶುರು

7,000 ಕೊರೊನಾವೈರಸ್ ಲಸಿಕೆ ವಿತರಣೆ ಕೇಂದ್ರ ಶುರು

ಮಧ್ಯಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಣೆ ಆರಂಭಿಸುವುದಕ್ಕೆ ಸರ್ಕಾರ ಅನುಮತಿ ನೀಡಿದ ಮೊದಲ ದಿನವೇ 10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ವಿತರಿಸುವ ಗುರಿನ್ನು ಹೊಂದಾಗಿತ್ತು. ಈ ನಿಟ್ಟಿನಲ್ಲಿ ಕೊರೊನಾವೈರಸ್ ಲಸಿಕೆ ವಿತರಿಸುವುದಕ್ಕಾಗಿ ರಾಜ್ಯದ 52 ಜಿಲ್ಲೆಗಳಲ್ಲಿ 7,000ಕ್ಕಿಂತಲೂ ಹೆಚ್ಚು ಲಸಿಕೆ ವಿತರಣೆ ಕೇಂದ್ರಗಳನ್ನು ತೆರೆಯಲಾಗಿತ್ತು. ಅಸ್ವಸ್ಥ ಹಾಗೂ ವೃದ್ಧರನ್ನು ಲಸಿಕೆ ಕೇಂದ್ರಕ್ಕೆ ಕರೆದುಕೊಂಡು ಹೋಗಲು ವಾಹನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಕೊರೊನಾವೈರಸ್ ಲಸಿಕೆ ಕೇಂದ್ರದಲ್ಲಿ ಪ್ರೇರಕರ ನೇಮಕ

ಕೊರೊನಾವೈರಸ್ ಲಸಿಕೆ ಕೇಂದ್ರದಲ್ಲಿ ಪ್ರೇರಕರ ನೇಮಕ

ರಾಜ್ಯದ ಪ್ರತಿಯೊಂದು ಕೊರೊನಾವೈರಸ್ ಲಸಿಕೆ ವಿತರಣೆ ಕೇಂದ್ರದಲ್ಲಿ ಒಬ್ಬ ಪ್ರೇಕರಕನ್ನು ಸರ್ಕಾರದಿಂದಲೇ ನೇಮಿಸಲಾಗಿತ್ತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂಪುಟದ ಸಚಿವರು, ಶಾಸಕರು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಲಸಿಕೆ ವಿತರಣೆ ಕೇಂದ್ರದಲ್ಲಿ ಪ್ರೇರಕರನ್ನಾಗಿ ನೇಮಿಸಿದ್ದು, ಲಸಿಕೆ ಪಡೆದುಕೊಳ್ಳಲು ಸಾರ್ವಜನಿಕರಿಗೆ ಪ್ರೇರಣೆ ನೀಡುವ ಕಾರ್ಯವನ್ನು ಇವರಿಗೆ ವಹಿಸಲಾಗಿತ್ತು.

"ಕೊರೊನಾವೈರಸ್ ಬಗ್ಗೆ ನಿರ್ಲಕ್ಷ್ಯ ವಹಿಸುವುದು ತರವಲ್ಲ"

"ಕೊರೊನಾವೈರಸ್ ಎಂಬುದು ಇನ್ನೂ ಕಡಿಮೆಯಾಗಿಲ್ಲ, ಆದ್ದರಿಂದ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೊರೊನಾ ಎಂಬುದು ಇಡೀ ಜಗತ್ತನ್ನೇ ಅಲುಗಾಡಿಸಿದೆ. ಇದರ ಮಧ್ಯೆ ಕೊರೊನಾವೈರಸ್ ಅನ್ನು ಜಯಿಸುವುದೇ ನಮ್ಮ ಆದ್ಯತೆ ಆಗಿರಬೇಕು," ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ. ಸೋಮವಾರ ದಾಟಿಯಾ ಜಿಲ್ಲೆ ಮಾ ಪೀತಾಂಬರ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಪೂಜೆ ಸಲ್ಲಿಸಿದ ಅವರು, ಪಾರಾಸರಿ ಗ್ರಾಮದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಉಚಿತ ಲಸಿಕೆ ವಿತರಣೆಗೆ ಚಾಲನೆ ನೀಡಿದರು.

ದೇಶದಲ್ಲಿ ಮೊದಲ ದಿನ 80 ಲಕ್ಷ ಜನರಿಗೆ ಲಸಿಕೆ

ದೇಶದಲ್ಲಿ ಮೊದಲ ದಿನ 80 ಲಕ್ಷ ಜನರಿಗೆ ಲಸಿಕೆ

ಸೋಮವಾರ ರಾತ್ರಿ 8 ಗಂಟೆ ವೇಳೆಗೆ 80,95,314 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಈ ಹಿಂದೆ ಏಪ್ರಿಲ್ 2ರಂದು ಅತಿಹೆಚ್ಚು ಅಂದರೆ 42,65,157 ಜನರಿಗೆ ಲಸಿಕೆ ನೀಡಿರುವುದೇ ದಾಖಲೆಯಾಗಿತ್ತು. ದೇಶದಲ್ಲಿ ಜೂನ್ 21ರಿಂದಲೇ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮೊದಲ ದಿನ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ಮೊದಲ ದಿನ ಯಾವ ರಾಜ್ಯದಲ್ಲಿ ಎಷ್ಟು ಲಸಿಕೆ ವಿತರಣೆ?

ಮೊದಲ ದಿನ ಯಾವ ರಾಜ್ಯದಲ್ಲಿ ಎಷ್ಟು ಲಸಿಕೆ ವಿತರಣೆ?

ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 7 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ದಿನ ಕನಿಷ್ಠ 10 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಉಳಿದಂತೆ ಮಧ್ಯ ಪ್ರದೇಶ 16,01,548, ಉತ್ತರ ಪ್ರದೇಶ 6,74,546, ರಾಜಸ್ಥಾನ 4,30,439, ಮಹಾರಾಷ್ಟ್ರ 3,78,945, ಪಶ್ಚಿಮ ಬಂಗಾಳ 3,17,991, ಪಂಜಾಬ್ 90,503 ಮತ್ತು ದೆಹಲಿಯಲ್ಲಿ 76,216 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

English summary
Madhya Pradesh Model How Inspired In Coronavirus Vaccination For The Other States.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X