ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಡತನ, ಹಸಿವು ತಾಳಲಾರದೆ ಕೀಟನಾಶಕ ಸೇವಿಸಿದ ಬಾಲಕ

|
Google Oneindia Kannada News

ಭೋಪಾಲ್​, ಜನವರಿ 9: ಹಸಿವು ಎನ್ನುವುದು ಮನುಷ್ಯನನ್ನು ಯಾವ ಹಂತಕ್ಕೆ ಬೇಕಾದರೂ ಇಳಿಸುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ, ಹಸಿವು ತಾಳಲಾರದೆ ಬಾಲಕನೊಬ್ಬ ಕೀಟನಾಶಕ ಸೇವಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ.

ವಿಷ ಪ್ರಸಾದ ಪ್ರಕರಣ: ಊರಿಗೆ ಕಿಚ್ಚುಗುತ್ತಿ ಎಂಬ ಹೆಸರು ಬಂದಿದ್ದು ಹೇಗೆ? ವಿಷ ಪ್ರಸಾದ ಪ್ರಕರಣ: ಊರಿಗೆ ಕಿಚ್ಚುಗುತ್ತಿ ಎಂಬ ಹೆಸರು ಬಂದಿದ್ದು ಹೇಗೆ?

ಬಾಲಕ ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಿಳಿಸಿದೆ.

ವಿಷಪ್ರಸಾದಕ್ಕೆ ಮತ್ತೆರೆಡು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ ವಿಷಪ್ರಸಾದಕ್ಕೆ ಮತ್ತೆರೆಡು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಕೋಟಾದಿಂದ ಮರಳಿ ಬಂದ ಬಾಲಕನ ತಂದೆ ನಮ್ಮ ಮನೆಯಲ್ಲಿ ಯಾವುದೇ ಪಡಿತರ ಇಲ್ಲ. ಈ ವಿಚಾರವನ್ನು ಹತ್ತಿಕ್ಕಲು ಅಧಿಕಾರಿಗಳು ಮನೆಯಲ್ಲಿ ಪಡಿತರ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

Hunger drives 10-year-old boy to consume poison in MP

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಆಯೋಗದ ಮುಖ್ಯಸ್ಥ ರಾಘವೇಂದ್ರ ಶರ್ಮಾ ಮಾತನಾಡಿ, ತುಂಬಾ ಹಸಿವಾಗಿತ್ತು. ಮನೆಯಲ್ಲಿ ಊಟ ಇಲ್ಲದಿದ್ದರಿಂದ ಕೈಗೆ ಸಿಕ್ಕಿದ್ದನ್ನು ಕುಡಿದುಬಿಟ್ಟೆ ಎಂದು ಬಾಲಕ ತಿಳಿಸಿರುವುದಾಗಿ ಮಾಹಿತಿ ನೀಡಿದರು.

ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ

ಬಾಲಕನ ಕುಟುಂಬಸ್ಥರು ಜಂಟಿಯಾಗಿ ಸ್ವಲ್ಪ ಕೃಷಿ ಭೂಮಿಯನ್ನು ಹೊಂದಿದ್ದು, ಕಳೆದ ನವೆಂಬರ್​ನಲ್ಲಿ ಕೊನೆಯ ಪಡಿತರವನ್ನು ಪಡೆದುಕೊಂಡಿದ್ದಾರೆ. ಬಾಲಕನ ಕುಟುಂಬಸ್ಥರು ರಾಜಸ್ಥಾನದ ಕೋಟಾ ಪ್ರದೇಶಕ್ಕೆ ಕೂಲಿಗಾಗಿ ತೆರಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

English summary
An investigation by the National Commission of Protection of Child Rights (NCPCR) has revealed that a 10-year- old tribal boy from a village in Ratlam district of Madhya Pradesh consumed insecticide to fulfil his hunger, the boy, who is undergoing treatment at a local hospital, is said to be out of danger now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X