ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಕಾರ್ಯಕ್ರಮಕ್ಕೂ ಮುನ್ನ ಕನ್ಯಾಪೂಜೆ ಕಡ್ಡಾಯದ ಆದೇಶ

|
Google Oneindia Kannada News

ಭೋಪಾಲ್, ಡಿಸೆಂಬರ್ 25: ಮಧ್ಯಪ್ರದೇಶದ ಸರ್ಕಾರವು ಕನ್ಯಾ ಪೂಜೆ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಹೌದು, ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ವಿಶೇಷ ಆದೇಶ ಹೊರಡಿಸಿದ್ದು ಕನ್ಯಾ ಪೂಜೆಯನ್ನು ಕಡ್ಡಾಯಗೊಳಿಸಿದೆ.

ಯಾವುದೇ ಸರ್ಕಾರಿ ಕಾರ್ಯಕ್ರಮ ಪ್ರಾರಂಭಕ್ಕೆ ಮುನ್ನ ಮುಖ್ಯ ಅತಿಥಿಗಳು ಕನ್ಯಾ ಪೂಜೆ ನೆರವೇರಿಸಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಲಲಿದೆ ಎಂದು ಸರ್ಕಾರ ಹೇಳಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮ ಪ್ರಾರಂಭಿಸುವ ಮುನ್ನ ಹೆಣ್ಣನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.

"ಶೂದ್ರರನ್ನು ಶೂದ್ರರು ಎಂದು ಕರೆದರೆ ಬೇಸರಪಟ್ಟುಕೊಳ್ಳುತ್ತಾರೆ ಏಕೆ?"

ಈ ಕುರಿತು ಟ್ವಿಟ್ಟರ್‌ನಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿದ್ದು, ಎಲ್ಲಾ ರಾಜ್ಯಗಳಲ್ಲೂ ಅಂತಹ ಒಂದು ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಎನ್ನುವ ಮಾತುಗಳೂ ಕೇಳಿಬಂದಿವೆ.

In Madhya Pradesh Kanya Puja Will Be Done Before All Government Programms

ಆಗಸ್ಟ್ 15 ರಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಘೋಷಣೆ ಮಾಡಿದ್ದರು. ಶಿವರಾಜ್ ಸಿಂಗ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಹೆಣ್ಣುಮಕ್ಕಳಿಗೆ ಪೂಜೆ ಮಾಡಿಯೇ ಸರ್ಕಾರದ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತಿತ್ತು.

ಡಿಸೆಂಬರ್ 2018ರಲ್ಲಿ ಅಧಿಕಾರಕ್ಕೆ ಬಂದಿದ್ದ ಕಮಲ್‌ನಾಥ್ ಸರ್ಕಾರ ಈ ಪರಂಪರೆಯನ್ನು ಬಂದ್ ಮಾಡಿದ್ದರು. 2020ರಿಂದ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮತ್ತೆ ಹಳೆಯ ಪರಂಪರೆಯನ್ನು ಮರುಕಳುಸುವಂತೆ ಮಾಡಿದ್ದಾರೆ. ಶುಕ್ರವಾರ ನಡೆದ ಸಾಮಾನ್ಯ ಶಾಸನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

English summary
Madhya Pradesh Government ordered Kanya Pooja will be done before all government programs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X