• search
 • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಬಳಸುವ ಸ್ಯಾನಿಟೈಸರ್ ಎಂಥದ್ದು?

|

ಇಂದೋರ್, ಜೂನ್.08: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪ್ರತಿನಿತ್ಯ ಏರಿಕೆಯಾಗುತ್ತಿವೆ. ದೇಶದಲ್ಲಿ 5ನೇ ಬಾರಿ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ ಬಹುತೇಕ ಎಲ್ಲ ವಲಯಗಳಿಗೂ ಬಿಗ್ ರಿಲೀಫ್ ನೀಡಿದೆ.

   Chiranjeevi Sarja : ಕನಕಪುರ ಬಳಿಯ ಬೃಂದಾವನ ಫಾರ್ಮ್ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ |

   ದೇಶಾದ್ಯಂತ ಜೂನ್.8ರಿಂದ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳು ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಧಾರ್ಮಿಕ ಕೇಂದ್ರಗಳಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

   ಜೂನ್ 8 ರಿಂದ ಚಾಮುಂಡಿ ಬೆಟ್ಟ ರೀ ಓಪನ್: ಗಮನಿಸಬೇಕಾದ ಅಂಶಗಳು

   ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳನ್ನು ಸ್ಯಾನಿಟೈಸ್ ಮಾಡುವುದನ್ನು ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದೆ. ಆದರೆ ಪವಿತ್ರ ಸ್ಥಳ ಎನಿಸಿರುವ ಧಾರ್ಮಿಕ ಕೇಂದ್ರಗಳಲ್ಲಿ ಆಲ್ಕೋಹಾಲ್ ಅಂಶವಿಲ್ಲದ ಸ್ಯಾನಿಟೈಸರ್ ಬಳಸಲಾಗುತ್ತದೆ ಎಂದು ಇಂದೋರ್ ಸಂಸದ ಶಂಕರ್ ಲಾಲ್ವಾನಿ ತಿಳಿಸಿದ್ದಾರೆ.

   ಇಂದೋರ್ ನಲ್ಲಿ ಯಾವುದೇ ದೇಗುಲ ತೆರೆಯಲ್ಲ:

   ಮಧ್ಯಪ್ರದೇಶದ ಹಲವೆಡೆಗಳಲ್ಲಿ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳನ್ನು ಜೂನ್.08ರಿಂದ ತೆರೆಯಲಾಗುತ್ತಿದೆ. ಈ ಹಿನ್ನೆಲೆ ಧಾರ್ಮಿಕ ಕೇಂದ್ರಗಳಲ್ಲಿ ಸ್ಯಾನಿಟೈಸ್ ಕಾರ್ಯವನ್ನು ನಡೆಸಲಾಗುತ್ತಿದೆ. ಆದರೆ ಇಂದೋರ್ ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಯಾವುದೇ ದೇವಸ್ಥಾನಗಳನ್ನು ತೆರೆಯುವ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ. ತಕ್ಷಣಕ್ಕೆ ಧಾರ್ಮಿಕ ಕೇಂದ್ರಗಳನ್ನು ತೆರೆದಲ್ಲಿ ಭಕ್ತರನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಸಂಸದ ಶಂಕರ್ ಲಾಲ್ವಾನಿ ಹೇಳಿದ್ದಾರೆ.

   ಇಂದೋರ್ ಜಿಲ್ಲೆಯೊಂದರಲ್ಲೇ ಇದುವರೆಗೂ 3,785ಕ್ಕೂ ಅಧಿಕ ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಮಹಾಮಾರಿಯಿಂದ 157 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯು ಸ್ಪಷ್ಟಪಡಿಸಿದೆ.

   English summary
   Non-alcohol-based Sanitisers Used For sanitised the Temple. Indore Temples Not Open On June.08. Know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X