ಮಧ್ಯಪ್ರದೇಶ; ಬಿಜೆಪಿ ಸೇರಲಿರುವ ಜ್ಯೋತಿರಾಧಿತ್ಯಾ ಸಿಂಧಿಯಾ

ಭೋಪಾಲ್, ಮಾರ್ಚ್, 10: ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆಯಲ್ಲಿ ನಿರೀಕ್ಷಿಸಿದಂತೆ ಮಧ್ಯಪ್ರದೇಶ ಉಚ್ಚಾಟಿತ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯಾ ಸಿಂಧಿಯಾಅವರು ಬುಧವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಜ್ಯೋತಿರಾಧಿತ್ಯಾ ಸಿಂಧಿಯಾ ಅವರು ಮಂಗಳವಾರ ಎಐಸಿಸಿಗೆ ರಾಜೀನಾಮೆ ಸಲ್ಲಿಸಿರುವ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ತಲುಪಿಸಿದರು.

ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮನೆ ಸಲ್ಲಿಸಿರುವ ಕಾಂಗ್ರೆಸ್‌ನ 22 ಶಾಸಕರಲ್ಲಿ 19 ಶಾಸಕರ ರಾಜೀನಾಮೆ ಪತ್ರಗಳು ಸ್ಪೀಕರ್ ಪ್ರಜಾಪತಿ ಅವರ ಕೈ ಸೇರಿವೆ. ಈ ಎಲ್ಲ 22 ಕಾಂಗ್ರೆಸ್ ಶಾಸಕರು ಜ್ಯೋತಿರಾಧಿತ್ಯಾ ಅವರ ಬಣ ಸೇರಿದ್ದಾರೆ. ಇದರಿಂದ ಕಮಲನಾಥ್ ನೇತೃತ್ವದ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ.

Jyotiraditya Scindia Likely Joins BJP On Wednsday

ಮದ್ಯಪ್ರದೇಶದಲ್ಲಿ ಕಾಂಗ್ರೆಸ್ ಇತರ ಪಕ್ಷೇತರ ಶಾಸಕರನ್ನು ನಂಬಿ ಸರ್ಕಾರ ರಚಿಸಿದೆ. 230 ಬಲದ ವಿಧಾನಸಭೆಯಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ 109, ಕಾಂಗ್ರೆಸ್ 114 ಹಾಗೂ ಇತರರು 7 ಜನ ಸ್ಥಾನ ಪಡೆದಿದ್ದರು. ಬಹುಮತಕ್ಕೆ 116 ಸ್ಥಾನಗಳ ಅಗತ್ಯತೆ ಇದೆ. ಆದರೆ, ಈಗ 22 ಶಾಸಕರ ರಾಜೀನಾಮೆಯಿಂದ ವಿಧಾನಸಭೆ ಬಲಾಬಲ ೨೦೬ ಕ್ಕೆ ಕುಸಿದಿದ್ದು, ಕಾಂಗ್ರೆಸ್‌ನ 96 ಅಲ್ಪಮತಕ್ಕೆ ಕುಸಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+