ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸೇರುವ ಜ್ಯೋತಿರಾದಿತ್ಯ ಸಿಂಧಿಯಾ ಲೆಕ್ಕಾಚಾರವೇನು?

|
Google Oneindia Kannada News

ಭೋಪಾಲ್, ಮಾರ್ಚ್ 10 : ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದಿದ್ದಾರೆ. ಅವರು ಶನಿವಾರ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಬಿಜೆಪಿ ಸೇರಿದರೆ ಆಗುವ ಲಾಭದ ಲೆಕ್ಕಾಚಾರವೇನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮಂಗಳವಾರ ಮಧ್ಯಪ್ರದೇಶದ ರಾಜಕೀಯ ತಿರುವು ಪಡೆದಿದೆ. ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ತಕ್ಷಣ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ರಾಜ್ಯಸಭಾ ಚುನಾವಣೆ; ಬಿಜೆಪಿ ಬಹುಮತ ಪಡೆಯುವುದು ಕಷ್ಟರಾಜ್ಯಸಭಾ ಚುನಾವಣೆ; ಬಿಜೆಪಿ ಬಹುಮತ ಪಡೆಯುವುದು ಕಷ್ಟ

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗುವ ಜ್ಯೋತಿರಾದಿತ್ಯ ಸಿಂಧಿಯಾಗೆ ಬಿಜೆಪಿ ಸೇರಿದರೆ ಸಿಗುವ ಲಾಭವೇನು?. ಸದ್ಯದ ಮಾಹಿತಿ ಪ್ರಕಾರ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗುತ್ತದೆ.

BREAKING: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾBREAKING: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ

ಮಾರ್ಚ್ 26ರಂದು ಮಧ್ಯಪ್ರದೇಶ ವಿಧಾನಸಭೆಯಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಿಗದಿಯಾಗಿದೆ. ಮಾರ್ಚ್ 13ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.

ಮಧ್ಯಪ್ರದೇಶ ಹೈಡ್ರಾಮ; ರಾಜೀನಾಮೆಗೆ ಸಿದ್ದವಾದ 25 ಕಾಂಗ್ರೆಸ್‌ ಶಾಸಕರುಮಧ್ಯಪ್ರದೇಶ ಹೈಡ್ರಾಮ; ರಾಜೀನಾಮೆಗೆ ಸಿದ್ದವಾದ 25 ಕಾಂಗ್ರೆಸ್‌ ಶಾಸಕರು

ಕೇಂದ್ರದಲ್ಲಿ ಸಚಿವ ಸ್ಥಾನ

ಕೇಂದ್ರದಲ್ಲಿ ಸಚಿವ ಸ್ಥಾನ

ಬಿಜೆಪಿ ಮೂಲಗಳ ಮಾಹಿತಿ ಪ್ರಕಾರ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗುತ್ತದೆ. ಬಳಿಕ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಲಾಗುತ್ತದೆ. ಆದರೆ, ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಕೇಂದ್ರ ಸಚಿವರೊಬ್ಬರು ನಿರಾಕರಿಸಿದರು.

ಮಾರ್ಚ್ 16ರಂದು ವಿಶ್ವಾಸಮತ ಯಾಚನೆ?

ಮಾರ್ಚ್ 16ರಂದು ವಿಶ್ವಾಸಮತ ಯಾಚನೆ?

ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆ ಇಂದು ಕಾಂಗ್ರೆಸ್‌ನ 19 ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿದೆ. ಮಾರ್ಚ್ 16ರಂದು ಮಧ್ಯಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 16ರಂದು ಆರಂಭವಾಗಲಿದ್ದು, ಅಂದು ವಿಶ್ವಾಸಮತವನ್ನು ಸಾಬೀತು ಮಾಡಬೇಕಿದೆ.

ಮಾರ್ಚ್ 26ರಂದು ಚುನಾವಣೆ

ಮಾರ್ಚ್ 26ರಂದು ಚುನಾವಣೆ

ಮಾರ್ಚ್ 26ರಂದು ಮಧ್ಯಪ್ರದೇಶ ವಿಧಾನಸಭೆಯಿಂದ 3 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಒಂದು ವೇಳೆ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡರೆ ಚುನಾವಣಾ ಲೆಕ್ಕಾಚಾರ ಬದಲಾಗಲಿದೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 13ರ ತನಕ ಅವಕಾಶವಿದೆ.

ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿ

ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿ

ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ, ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಮಾಡುವುದು ಬಿಜೆಪಿಯ ಲೆಕ್ಕಾಚಾರವಾಗಿದೆ. ಈಗಾಗಲೇ ಮೂರು ಬಾರಿ ಅವರು ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

English summary
Jyotiraditya Scindia who quit the Congress will be joining the BJP. Party sources said that party may announce his name for the Rajya Sabha seat from Madhya Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X