ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲನಾಥ್ : ಕಾಂಗ್ರೆಸ್

|
Google Oneindia Kannada News

ಭೋಪಾಲ್, ಡಿಸೆಂಬರ್ 11: ಚುನಾವಣಾ ಸಮೀಕ್ಷೆಗಳ ಫಲಿತಾಂಶಕ್ಕೆ ವ್ಯತಿರಿಕ್ತವಾದ ಜನಾದೇಶದ ನಿರೀಕ್ಷೆಯನ್ನು ಮಧ್ಯಪ್ರದೇಶ ಎದುರು ನೋಡುತ್ತಿದೆ.

15 ವರ್ಷಗಳ ಬಿಜೆಪಿ ಆಡಳಿತಕ್ಕೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಲಿದೆ ಎಂಬ ಟ್ರೆಂಡ್ ಹುಟ್ಟಿಕೊಂಡಿದೆ.

ಮಧ್ಯಪ್ರದೇಶದ ಮುಂದಿನ ಸಿಎಂ ಯಾರು? ಕಮಲ್ ನಾಥ್ ಏನಂತಾರೆ? ಮಧ್ಯಪ್ರದೇಶದ ಮುಂದಿನ ಸಿಎಂ ಯಾರು? ಕಮಲ್ ನಾಥ್ ಏನಂತಾರೆ?

ಮಧ್ಯಪ್ರದೇಶದ ಸದ್ಯದ ಟ್ರೆಂಡ್ 10.50 ಸಮಯ : 230 ಸೀಟು : ಕಾಂಗ್ರೆಸ್ 112; ಬಿಜೆಪಿ 103, ಇತರೆ 15

ಪಂಚರಾಜ್ಯ ಚುನಾವಣೆ ಫಲಿತಾಂಶ LIVE: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗಪಂಚರಾಜ್ಯ ಚುನಾವಣೆ ಫಲಿತಾಂಶ LIVE: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ

ಕಮಲ್ ನಾಥ್ ಅವರಿಗೆ ಡಿಸೆಂಬರ್ 11ರ ಬೆಳಗ್ಗೆ ಮತ ಎಣಿಕೆ ಆರಂಭಕ್ಕೂ ಮುನ್ನವೇ ಶುಭಾಶಯಗಳ ಮಹಾಪೂರ ಹರಿದು ಬರತೊಡಗಿತ್ತು. ಈಗ ಕಮಲ್ ನಾಥ್ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನಾಗಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.

Kamal Nath as Madhya Pradesh CM : Congress

ಮಧ್ಯ ಪ್ರದೇಶ ಅತಂತ್ರ? ಯಾರ ಕೈಗೂ ಸಿಗದ ಪ್ರಳಯಾಂತಕಿ ಮಾಯಾವತಿ ಮಧ್ಯ ಪ್ರದೇಶ ಅತಂತ್ರ? ಯಾರ ಕೈಗೂ ಸಿಗದ ಪ್ರಳಯಾಂತಕಿ ಮಾಯಾವತಿ

ಈ ಮೂಲಕ ಅನುಭವಕ್ಕೆ ಮಣೆ ಹಾಕಿದ್ದು, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರು ಕೂಡಾ ಕಮಲ್ ನಾಥ್ ಅವರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ವ್ಯಕ್ತ ಪಡಿಸಿದ್ದಾರೆ.

ಅಚ್ಚರಿ ಮೂಡಿಸಲಿದೆ ಮಧ್ಯಪ್ರದೇಶ ಫಲಿತಾಂಶ: ಕಮಲ್ ನಾಥ್ ಅಚ್ಚರಿ ಮೂಡಿಸಲಿದೆ ಮಧ್ಯಪ್ರದೇಶ ಫಲಿತಾಂಶ: ಕಮಲ್ ನಾಥ್

9 ಬಾರಿ ಛಿಂದ್ವಾರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕಮಲ್ ನಾಥ್ ಅವರು ಸದ್ಯ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಜ್ಯೋತಿರಾದಿತ್ಯಾ ಸಿಂಧಿಯಾ ಜತೆಗೆ ಕಮಲ್ ನಾಥ್ ಅವರು ಜಂಟಿಯಾಗಿ ಶಿವರಾಜ್ ಸಿಂಗ್ ಚೌಹಾಣ್ ಪಡೆ ವಿರುದ್ಧ ಸಮರ ಸಾರಿದ್ದರು. ದಿಗ್ವಿಜಯ್ ಸಿಂಗ್ ಅವರು ಪ್ರಚಾರ ಸಭೆಗಳಿಂದ ದೂರವುಳಿದರೂ ಗೆಲುವಿಗೆ ಬೇಕಾದ ರಣತಂತ್ರ ರೂಪಿಸುವಲ್ಲಿ ಯಶಸ್ವಿಯಾಗಿದ್ದರು.

English summary
As per the trends Senior leader Kamal Nath the chief og the Party's state unit and nine time Lok Sabha member from Chhindwara seat is set to become CM of Madhya Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X