ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶದ ಮುಂದಿನ ಸಿಎಂ ಯಾರು? ಕಮಲ್ ನಾಥ್ ಏನಂತಾರೆ?

|
Google Oneindia Kannada News

Recommended Video

ಮಧ್ಯಪ್ರದೇಶದ ಮುಂದಿನ ಸಿಎಂ ಬಗ್ಗೆ ಕಮಲ್‍ನಾಥ್ ಪ್ರತಿಕ್ರಿಯೆ

ಭೋಪಾಲ್, ಡಿಸೆಂಬರ್ 10: ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು...? ಈ ಪ್ರಶ್ನೆಗೆ ಇಲ್ಲಿನ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಉತ್ತರಿಸಿದ್ದಾರೆ.

ರೆಬೆಲ್ಸ್ ಓಲೈಕೆಯಲ್ಲಿ ಕಾಂಗ್ರೆಸ್, ಬಿಜೆಪಿ: ಒಂದು ದಿನದ ನಂತರ ಏನಾದೀತು! ರೆಬೆಲ್ಸ್ ಓಲೈಕೆಯಲ್ಲಿ ಕಾಂಗ್ರೆಸ್, ಬಿಜೆಪಿ: ಒಂದು ದಿನದ ನಂತರ ಏನಾದೀತು!

ನ.28 ರಂದು ನಡೆದ ಮಧ್ಯಪ್ರದೇಶ ವಿಧಾನಸಭಾಚುನಾವಣೆಯ ಫಲಿತಾಂಶ ಡಿ.11 ರಂದು ಹೊರಬೀಳಲಿರುವ ಹಿನ್ನೆಲೆಯಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಗೆಹ್ಲೋಟ್, ಪೈಲಟ್ ಫೈಟ್!ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಗೆಹ್ಲೋಟ್, ಪೈಲಟ್ ಫೈಟ್!

"ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 140(230) ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ. ನಾಳೆಯವರೆಗೂ ಕಾಯಿರಿ" ಎಂದರು.

Kamal Nath reacts to the question related to next CM of Madhya Pradesh

"ಕಾಂಗ್ರೆಸ್ ಗೆದ್ದರೆ ಮುಂದಿನ ಮುಖ್ಯಮಂತ್ರಿ ಯಾರು?" ಎಂಡು ಪ್ರಶ್ನಿಸಿದ ಪತ್ರಕರ್ತರಿಗೆ ನಗುತ್ತಲೇ, 'ನಾಳೆಯವರೆಗೂ ಕಾಯಿರಿ. ಅಷ್ಟರಲ್ಲೇ ಎಲ್ಲವೂ ಸ್ಪಷ್ಟವಾಗಲಿದೆ' ಎಂದರು.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ : ಡೇಲಿಹಂಟ್ ನಲ್ಲಿ ತ್ವರಿತ ಅಪ್ಡೇಟ್ ಪಡೆಯಿರಿ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರೂ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿ. ಆಕಾರಣಕ್ಕಾಗಿಯೇ ಕಮಲ್ ನಾಥ್ ಮತ್ತು ಜ್ಯೋತಿರಾಧಿತ್ಯ ಸಿಂಧಿಯಾ ಅವರ ನಡುವೆ ಹಗ್ಗಜಗ್ಗಾಟ ನಡೆಯುತ್ತಲೇ ಇದೆ.

ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿರ್ಧರಿಸಿರುವುದರಿಂದ ಕಮಲ್ ನಾಥ್ ಅತೃಪ್ತರಾಗಿದ್ದರು. ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೂ ಉಭಯ ನಾಯಕರ ನಡುವೆ ಸಾಕಷ್ಟು ಅತೃಪ್ತಿ ಮನೆಮಾಡಿತ್ತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಧಾನವೂ ನಡೆದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

English summary
Kamal Nath when asked who will be the CM if Congress wins in Madhya Pradesh: We will win more than 140 seats. Wait till tomorrow, everything will be clear by then.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X