• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕಾಂಗ ಪಕ್ಷಕ್ಕೆ ಕಮಲ್ ನಾಥ್ ರಾಜೀನಾಮೆ

|
Google Oneindia Kannada News

ಮಧ್ಯಪ್ರದೇಶ, ಏಪ್ರಿಲ್ 28 : ಮಧ್ಯಪ್ರದೇಶ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕಮಲ್ ನಾಥ್‌ ರಾಜೀನಾಮೆ ನೀಡಿದ್ದಾರೆ.

ಗುರುವಾರ ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ಸ್ಥಾನಕ್ಕೆ ಕಮಲ್ ನಾಥ್‌ ರಾಜೀನಾಮೆ ನೀಡಿದ್ದಾರೆ. ಇನ್ನು ಈ ರಾಜೀನಾಮೆಯನ್ನ ಕಾಂಗ್ರೆಸ್ ಅಂಗೀಕರಿಸಿದ್ದು, ಕಮಲ್ ನಾಥ್‌ ನಂತರ ಡಾ. ಗೋವಿಂದ್ ಸಿಂಗ್ ಅವರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರು ಕಮಲ್‌ ನಾಥ್‌ ಅವರಿಗೆ ಪತ್ರ ಬರೆದಿದ್ದು, ಗೌರವಾನ್ವಿತ ಕಾಂಗ್ರೆಸ್‌ ಅಧ್ಯಕ್ಷರು ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನೀವು ರಾಜೀನಾಮೆ ನೀಡಿರುವುದನ್ನ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಮಧ್ಯಪ್ರದೇಶದ ಸಿಎಲ್‌ಪಿ ನಾಯಕರಾಗಿ ನೀವು ಪಕ್ಷಕ್ಕೆ ನೀಡಿದ ಕೊಡುಗೆಯನ್ನ ಮನಃಪೂರ್ವಕವಾಗಿ ಶ್ಲಾಘಿಸುತ್ತೇವೆ ಎಂದು ಪತ್ರ ಬರೆದಿದ್ದಾರೆ.

2018 ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಮಲ್ ನಾಥ್‌ 15 ತಿಂಗಳುಗಳ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 2020 ರಲ್ಲಿ ಹಾಲಿ ಶಾಸಕರ ರಾಜೀನಾಮೆ ನಂತರ ಸರ್ಕಾರ ಪತನಗೊಂಡು ಜುಲೈ 2020 ರಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಹುದ್ದೆಯನ್ನ ವಹಿಸಿಕೊಂಡಿದ್ದರು. ಸದ್ಯ ಈಗ ಆ ಹುದ್ದೆಗೂ ರಾಜೀನಾಮೆ ನೀಡಿದ್ದಾರೆ.

English summary
Congress leader Kamal Nath on Thursday resigned as the Leader of Opposition in Madhya Pradesh Assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X