• search
 • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Video: ಕೊರೊನಾ ತಪಾಸಣೆಗೆ ತೆರಳಿದ ವೈದ್ಯರ ಮೇಲೆ ಕಲ್ಲುತೂರಾಟ

|

ಭೂಪಾಲ್, ಏಪ್ರಿಲ್.02: ಕೊರೊನಾ ವೈರಸ್ ಮುಕ್ತ ಭಾರತ ನಿರ್ಮಾಣಕ್ಕೆ ವೈದ್ಯರು, ಪೊಲೀಸರು, ವಿಜ್ಞಾನಿಗಳು ಸೇರಿದಂತೆ ಹಲವು ಮಂದಿ ಶ್ರಮಿಸುತ್ತಿದ್ದಾರೆ. ತಮ್ಮ ಕುಟುಂಬವನ್ನೂ ತೊರೆದು ಜನಸೇವೆಯಲ್ಲಿ ನಿರತರಾಗಿದ್ದಾರೆ.

   ಲಾಕ್ ಡೌನ್ ಆದೇಶದವರೆಗೆ ರಾಜ್ಯದಲ್ಲಿ ಉಚಿತ ಹಾಲು ಪೂರೈಕೆಗೆ BSY ಸೂಚನೆ | Free Milk | KMF | Bangalore

   ಜನರಲ್ಲಿ ಅರಿವು ಮೂಡಿಸುತ್ತಾ ಪೊಲೀಸರು ರಸ್ತೆಯಲ್ಲೇ ನಿಂತಿದ್ದರೆ, ಇನ್ನೊಂದು ಕಡೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮನೆ ಮನೆಗೆ ತೆರಳಿ ಕೊರೊನಾ ವೈರಸ್ ತಪಾಸಣೆ ನಡೆಸಲಾಗುತ್ತಿದೆ. ಆದರೆ ಈ ವೇಳೆ ವೈದ್ಯಕೀಯ ಸಿಬ್ಬಂದಿ ಮೇಲೆ ನಡೆದ ಘಟನೆ ಸಾಕಷ್ಟು ಸುದ್ದಿಯಾಗುತ್ತಿದೆ.

   ತಬ್ಲಿಘ್ ಜಮಾತ್: ವೈದ್ಯರ ಮೇಲೆ ಉಗುಳಿದ ಜಮಾತ್ ಕಾರ್ಯಕರ್ತರು

   ಮಧ್ಯಪ್ರದೇಶದ ಇಂದೋರ್ ನಲ್ಲಿರುವ ತಟಪಟ್ಟಿ ಬಖಲ್ ಎಂಬ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಕೊರೊನಾ ಸ್ಕ್ರೀನಿಂಗ್ ನಡೆಸಲು ಮುಂದಾದ ವೈದ್ಯಕೀಯ ಸಿಬ್ಬಂದಿ ಮೇಲೆಯೇ ಸಾರ್ವಜನಿಕರು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

   ಸಿಸಿ ಕ್ಯಾಮರಾದಲ್ಲಿ ಸೆರೆ:

   ವೈದ್ಯಕೀಯ ಸಿಬ್ಬಂದಿ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸುತ್ತಿದ್ದಂತೆ ಸಿಬ್ಬಂದಿ ಸ್ಥಳದಿಂದ ಓಡಿದ್ದಾರೆ. ಈ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅದೇ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು, ರಾಜ್ಯದಲ್ಲಿ ಇದುವರೆಗೂ ಆರು ಮಂದಿ ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟಿದ್ದಾರೆ. 86ಕ್ಕೂ ಅಧಿಕ ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.

   English summary
   Madhya Pradesh: Local Peoples Pelt Stone Against Health Workers, Who Goes To Test Coronavirus Sreening.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X