ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೈಕಲ್ ಏರಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್!

|
Google Oneindia Kannada News

ಭೋಪಾಲ್, ಜೂನ್.25: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಾಗೂ ಲಾಕ್ ಡೌನ್ ನಡುವೆಯೂ ಸರ್ಕಾರದ ನಿಯಮವನ್ನು ಉಲ್ಲಂಘಿಸಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಮುಖಿಯಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಮಧ್ಯಪ್ರದೇಶದ ಭೂಪಾಲ್ ನಲ್ಲಿ ಕೇಂದ್ರ ಸರ್ಕಾರದ ದರ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ತಮ್ಮ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಸೈಕಲ್ ನಲ್ಲಿ ಸಂಚರಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಮಾಸ್ಕ್ ಹಾಕಿಕೊಳ್ಳದಿದ್ದರೆ ದುಬಾರಿ ದಂಡ; ಸಚಿವರಿಗೂ ಇಲ್ಲ ವಿನಾಯಿತಿ!ಮಾಸ್ಕ್ ಹಾಕಿಕೊಳ್ಳದಿದ್ದರೆ ದುಬಾರಿ ದಂಡ; ಸಚಿವರಿಗೂ ಇಲ್ಲ ವಿನಾಯಿತಿ!

ಕೊರೊನಾವೈರಸ್ ಹರಡುವಿಕೆ ಆತಂಕದ ನಡುವೆ ನೂರಾರು ಬೆಂಬಲಿಗರ ಜೊತೆಗೂಡಿ ಸೈಕಲ್ ಪ್ರತಿಭಟನೆ ನಡೆಸಿರುವುದು ಲಾಕ್ ಡೌನ್ ನಿಯಮದ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ದಿಗ್ವಿಜಯ್ ಸಿಂಗ್ ಸೇರಿದಂತೆ 150 ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Lockdown Violation: FIR Registered Against Congress Leader Digvijaya Singh

150 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್:

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಮಧ್ಯಪ್ರದೇಶದ ಭೂಪಾಲ್ ನಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹಾಗೂ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ನಲ್ಲಿ ತೆರಳುವ ಮೂಲಕ ಪ್ರತಿಭಟನೆ ನಡೆಸಿದರು. ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಎಲ್ಲರ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) 341, 188, 143, 269 ಮತ್ತು 270ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

English summary
Madhya Pradesh: FIR Registered Against Congress Leader Digvijaya Singh And 150 Other Party Workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X