Breaking: ನರ್ಮದಾ ನದಿಗೆ ಬಸ್ ಉರುಳಿ ಬಿದ್ದ ಬಸ್, 13 ಸಾವು

ಧಾರ್, ಜುಲೈ 18: ಮಧ್ಯಪ್ರದೇಶದ ಧಾರ್‌ನಲ್ಲಿ ಮಹಾರಾಷ್ಟ್ರದ ಸರ್ಕಾರಿ ಬಸ್ ನರ್ಮದಾ ನದಿಗೆ ಉರುಳಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ. ಇಂಧೋರ್‌ನಿಂದ ಬಸ್ ಮಹಾರಾಷ್ಟ್ರಕ್ಕೆ ತೆರಳುತ್ತಿತ್ತು.

ದುರಂತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬಸ್‌ನಲ್ಲಿ ಸುಮಾರು 50 ರಿಂದ 60 ಪ್ರಯಾಣಿಕರಿದ್ದರು. ಘಟನಾ ಸ್ಥಳದಿಂದ ಇದುವರೆಗೆ 15 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಧೋರ್‌ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್‌ಘಾಟ್ ಪ್ರದೇಶದಲ್ಲಿ ಸೇತುವೆಯ ಹಳಿ ಮುರಿದು ರಸ್ತೆಯಿಂದ ಉರುಳಿ ನದಿಗೆ ಬಿದ್ದಿದೆ.

Madhya Pradesh: 13 Dead As Bus Falls Into River Narmada

ಘಟನೆ ಕುರಿತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪ್ರತಿಕ್ರಿಯೆ ನೀಡಿದ್ದು, "ಜಿಲ್ಲಾಡಳಿತದ ತಂಡವು ಅಪಘಾತ ಸ್ಥಳದಲ್ಲಿದೆ. ಬಸ್ ಅನ್ನು ನದಿಯಿಂದ ಮೇಲೆ ತೆಗೆಯಲಾಗಿದೆ. ನಾನು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆಗಳನ್ನು ನೀಡಲಾಗಿದೆ" ಎಂದು ಹೇಳಿದ್ದಾರೆ.

"ಇಲ್ಲಿಯವರೆಗೆ 13 ಮೃತದೇಹಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾನು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ನಾವು ಸಾಧ್ಯವಿರುವ ಎಲ್ಲ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಘಟನೆ ಕುರಿತು ತನಿಖೆಗೆ ನಿರ್ದೇಶನ ನೀಡಲಾಗಿದೆ" ಎಂದಿದ್ದಾರೆ.

ಇನ್ನು, ನರ್ಮದಾ ನದಿಯಲ್ಲಿ ಸಂಭವಿಸಿದ ಎಂಎಸ್‌ಆರ್‌ಟಿಸಿ (ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ) ಬಸ್ ಅಪಘಾತದಲ್ಲಿ ಮೃತ ಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಎಂಎಸ್‌ಆರ್‌ಟಿಸಿ ಗೆ ಸೂಚನೆ ನೀಡಿದ್ದಾರೆ.

ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. "ಮಧ್ಯಪ್ರದೇಶದ ಧಾರ್‌ನಲ್ಲಿ ಸಂಭವಿಸಿದ ಬಸ್ ದುರಂತವು ದುಃಖಕರವಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಮತ್ತು ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ" ಎಂದು ಪ್ರಧಾನಿ ಮೋದಿಯವರನ್ನು ಉಲ್ಲೇಖಿಸಿ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+