ಮಧ್ಯಪ್ರದೇಶ ಹೈಡ್ರಾಮ; ರಾಜೀನಾಮೆಗೆ ಸಿದ್ದವಾದ 25 ಕಾಂಗ್ರೆಸ್‌ ಶಾಸಕರು

ಭೋಪಾಲ್, ಮಾರ್ಚ್ 10 : ಮಧ್ಯಪ್ರದೇಶದ ರಾಜಕೀಯ ಹೈಡ್ರಾಮ ಅಂತಿಮ ಹಂತಕ್ಕೆ ಬಂದು ತಲುಪಿದೆ. 25 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ 19 ಶಾಸಕರು ರಾಜೀನಾಮೆ ನೀಡಿದ್ದಾರೆ.

Recommended Video

      ಬ್ಯಾಂಕ್ ನಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆದಿದ್ದ TTD

      ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದರು. ತಕ್ಷಣ ಕಾಂಗ್ರೆಸ್ ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿತು.

      ಬೆಂಗಳೂರಿನಲ್ಲಿರುವ ಕಾಂಗ್ರೆಸ್‌ನ ಭಿನ್ನಮತೀಯ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ನಲ್ಲಿರುವ ಶಾಸಕರು ಕೈಯಲ್ಲಿ ರಾಜೀನಾಮೆ ಪತ್ರ ಹಿಡಿದು ಕುತಿರುವ ಫೋಟೋವನ್ನು ಬಿಡುಗಡೆ ಮಾಡಲಾಗಿದೆ.

      ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ 114 ಶಾಸಕರು ಇದ್ದಾರೆ. ಇವರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ 19 ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜಭನವದ ಮೂಲಗಳ ಪ್ರಕಾರ 14 ಶಾಸಕರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಇನ್ನೂ 25 ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

      ಅಲ್ಪ ಮತಕ್ಕೆ ಕುಸಿದ ಸರ್ಕಾರ

      ಅಲ್ಪ ಮತಕ್ಕೆ ಕುಸಿದ ಸರ್ಕಾರ

      ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ 19 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಮಲನಾಥ್ ನೇತೃತ್ವದ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಮುಖಭಂಗವಾಗಿವೆ.

      ಬಿಜೆಪಿ ಸೇರಲಿದ್ದಾರೆ ಸಿಂಧಿಯಾ

      ಬಿಜೆಪಿ ಸೇರಲಿದ್ದಾರೆ ಸಿಂಧಿಯಾ

      ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದರು. ಅವರು ಶನಿವಾರ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಕಾಂಗ್ರೆಸ್ ಈಗಾಗಲೇ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಉಚ್ಛಾಟನೆ ನಡೆಸಿದೆ.

      ರಾಜ್ಯಸಭೆಗೆ ಚುನಾವಣೆ ಟಿಕೆಟ್?

      ರಾಜ್ಯಸಭೆಗೆ ಚುನಾವಣೆ ಟಿಕೆಟ್?

      ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದರೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಸಾಧ್ಯತೆ ಇದೆ.

      ಮಧ್ಯಪ್ರದೇಶ ವಿಧಾನಸಭೆ ಬಲಾಬಲ

      ಮಧ್ಯಪ್ರದೇಶ ವಿಧಾನಸಭೆ ಬಲಾಬಲ

      ಮಧ್ಯಪ್ರದೇಶ ವಿಧಾನಸಭೆ 230 ಸದಸ್ಯ ಬಲ ಹೊಂದಿದೆ. ಬಿಜೆಪಿ 109, ಕಾಂಗ್ರೆಸ್ 114, ಪಕ್ಷೇತರ 1, ಬಿಎಸ್‌ಪಿ ಮತ್ತು ಎಸ್‌ಪಿ ತಲಾ 2 ಕ್ಷೇತ್ರಗಳಲ್ಲಿ ಜಯಗಳಿಸಿವೆ. ಇನ್ನೂ ಎರಡು ಸ್ಥಾನಗಳು ತೆರವಾಗಿವೆ. ಈಗ ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+