ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಐಟಂ' ಎಂಬ ಅವಹೇಳನೆಗೆ ಒಳಗಾಗಿದ್ದ ಬಿಜೆಪಿಯ ಇಮಾರ್ತಿ ದೇವಿಗೆ ಮುನ್ನಡೆ

|
Google Oneindia Kannada News

ಭೋಪಾಲ್, ನವೆಂಬರ್ 10: ತೀವ್ರ ಆಸಕ್ತಿ ಕೆರಳಿಸಿದ್ದ ಮಧ್ಯಪ್ರದೇಶದ ಡಬ್ರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಮುನ್ನಡೆ ಸಾಧಿಸಿದ್ದಾರೆ. ಡಬ್ರಾ ಕ್ಷೇತ್ರವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರಿಂದಾಗಿ ಈ ಕ್ಷೇತ್ರದ ಚುನಾವಣೆ ಆಸಕ್ತಿ ಕೆರಳಿಸಿತ್ತು. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದ ಕಮಲ್ ನಾಥ್, ಇಮಾರ್ತಿ ದೇವಿ ಅವರನ್ನು 'ಐಟಂ' ಎಂದು ಕರೆದಿದ್ದು ಭಾರಿ ವಿವಾದ ಸೃಷ್ಟಿಸಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಬಳಿಕ ಕಮಲ್ ನಾಥ್ ಅವರ ತಾರಾಪ್ರಚಾರಕ ಮಾನ್ಯತೆಯನ್ನು ಚುನಾವಣಾ ಆಯೋಗ ರದ್ದುಗೊಳಿಸಿತ್ತು. ಇದಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿ

ಇಮಾರ್ತಿ ದೇವಿ ಕಾಂಗ್ರೆಸ್‌ ಪಕ್ಷದ ಶಾಸಕರಾಗಿ 2018ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಬಳಿಕ ಬಂಡಾಯವೆದ್ದ ಜ್ಯೋತಿರಾದಿತ್ಯ ಸಿಂಧಿಯಾ ಜತೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿಕೊಂಡಿದ್ದರು. ಹೀಗಾಗಿ ಡಬ್ರಾ ಸೇರಿದಂತೆ 28 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು.

Madhya Pradesh Bypoll Result 2020: Imarti Devi Leads In Dabra

'ಆರಂಭಿಕ ಟ್ರೆಂಡ್ ನೋಡಿದಾಗಲೇ ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಗಳಿಸಲಿದೆ ಎನ್ನುವುದು ಅರ್ಥವಾಗುತ್ತದೆ. ನನ್ನ ವಿರುದ್ಧ ಅತ್ಯಂತ ಕೀಳುಮಟ್ಟದ ಭಾಷೆಯನ್ನು ಬಳಸಿದ್ದ ಕಮಲ್ ನಾಥ್ ಅವರಿಗೆ ಜನರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಹೇಳಲು ಬಯಸುತ್ತೇನೆ' ಎಂದು ಇಮಾರ್ತಿ ದೇವಿ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ತಮ್ಮದೇ ಗೆಲುವು ಎಂದು ಹೇಳಿಕೊಂಡಿದ್ದ ಕಮಲ್ ನಾಥ್ ಅವರ ಹೇಳಿಕೆಗೆ ಇಮಾರ್ತಿ, 'ಹಾಗೆ ಪ್ರತಿಪಾದಿಸಿಕೊಳ್ಳುವುದರಲ್ಲಿ ತಪ್ಪೇನೂ ಇಲ್ಲ' ಎಂದಿದ್ದಾರೆ.

English summary
Madhya Pradesh Bypoll Result 2020: BJP candidate Imarti Devi who came in light after Kamal Nath's Item remark leads in Dabra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X