• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊವಿಡ್ 19 ಆಸ್ಪತ್ರೆಯಿಂದ ಹೊರ ಬಂದ ಸಿಎಂ ಶಿವರಾಜ್ ಸಿಂಗ್

|

ಭೋಪಾಲ್, ಆ.5: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೊವಿಡ್ 19 ಆಸ್ಪತ್ರೆಯಿಂದ ಬುಧವಾರದಂದು ಹೊರ ಬಂದಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಕಳೆದ 10 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವರಾಜ್ ಸಿಂಗ್ ಅವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಆದರೆ ಯಾವುದೆ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಭೋಪಾಲ್‌ನಲ್ಲಿರುವ ಚಿರಾಯು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶಿವರಾಜ್ ಸಿಂಗ್ ಚೌವ್ಹಾಣ್ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನಾ ವಾರಿಯರ್ಸ್ ಗೆ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಸಂದೇಶ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಶಿವರಾಜ್ ಸಿಂಗ್ ಅವರು ಮನೆಯಲ್ಲೇ ಐಸೋಲೇಷನ್ ನಲ್ಲಿ ಇನ್ನೂ ಒಂದು ವಾರಗಳ ಕಾಲ ಇರಲಿದ್ದಾರೆ. ವೈದ್ಯರು ಪರೀಕ್ಷಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಶಿವರಾಜ್ ಸಿಂಗ್ ಆರೋಗ್ಯವಾಗಿದ್ದಾರೆ. ಪ್ರತಿದಿನ ಮುಂಜಾನೆ ಯೋಗ ಮತ್ತು ವ್ಯಾಯಾಮ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆಗಳನ್ನು ಮಾಡಿಸುತ್ತಿದ್ದಾರೆ.

ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 34,285. ಸೋಮವಾರ 750 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೂ 900 ಜನರು ಮೃತಪಟ್ಟಿದ್ದಾರೆ.

English summary
Madhya Pradesh Chief Minister Shivraj Singh Chouhan has been discharged from hospital on Wednesday after recovering from Covid-19, ANI has reported.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X