Get Updates
Get notified of breaking news, exclusive insights, and must-see stories!

ಬ್ರೇಕಿಂಗ್; ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ರಾಜೀನಾಮೆ

ಭೋಪಾಲ್, ಮಾರ್ಚ್ 20 : ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. ಮುಖ್ಯಮಂತ್ರಿ ಕಮಲನಾಥ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಮೊದಲೇ ರಾಜೀನಾಮೆ ನೀಡಿದ್ದಾರೆ. ಹಲವು ದಿನಗಳ ರಾಜಕೀಯ ಬಿಕ್ಕಟ್ಟು ಹೊಸ ತಿರುವು ಪಡೆದಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಇಂದು ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡಬೇಕಿತ್ತು. ಮಧ್ಯಾಹ್ನ 2 ಗಂಟೆಗೆ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವ ಪ್ರಕ್ರಿಯೆ ನಡೆಯಬೇಕಿತ್ತು.

ಶುಕ್ರವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಕಮಲನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ರಾಜ್ಯ ಬಿಜೆಪಿ ಘಟಕದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.

Madhya Pradesh CM Kamal Nath Resigns Ahead Of Floor Test

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ರಾಜೀನಾಮೆಯಿಂದಾಗಿ ಸುಮಾರು 15 ತಿಂಗಳ ಕಾಂಗ್ರೆಸ್ ಸರ್ಕಾರ ಪತನಗೊಂಡಿದೆ. 22 ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿದಿತ್ತು.

ಸತ್ಯ ಹೊರಬರಲಿದೆ

ಸತ್ಯ ಹೊರಬರಲಿದೆ

"ಬೆಂಗಳೂರಿನಲ್ಲಿ ಶಾಸಕರನ್ನು ಬಂಧನದಲ್ಲಿಟ್ಟ ಬಗ್ಗೆ ದೇಶದ ಜನರಿಗೆ ಸತ್ಯ ತಿಳಿಯಲಿದೆ. ಸತ್ಯ ಹೊರಬಂದಾಗ ಜನರು ಅವರನ್ನು ಕ್ಷಮಿಸುವುದಿಲ್ಲ" ಎಂದು ಪತ್ರಿಕಾಗೋಷ್ಠಿಯಲ್ಲಿ ಕಮಲನಾಥ್ ಹೇಳಿದರು.

ಬಿಜೆಪಿಯಿಂದ ಸಾಧ್ಯವಿಲ್ಲ

ಬಿಜೆಪಿಯಿಂದ ಸಾಧ್ಯವಿಲ್ಲ

"ನಮ್ಮನ್ನು ಸೋಲಿಸಿದ ಬಿಜೆಪಿಯವರು ತಾವು ಗೆದ್ದೆವು ಎಂದು ಆಲೋಚನೆ ನಡೆಸುತ್ತಿರಬಹುದು. ಅದು ತಪ್ಪು ಅವರು ಅದನ್ನು ಮಾಡಲು ಸಾಧ್ಯವೇ ಇಲ್ಲ" ಎಂದು ಕಮಲನಾಥ್ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಶಾಸಕರು ಬೆಂಗಳೂರಲ್ಲಿ

ಶಾಸಕರು ಬೆಂಗಳೂರಲ್ಲಿ

ಬೆಂಗಳೂರಿನ ಯಲಹಂಕ ಬಳಿಯ ರಮಡಾ ಹೋಟೆಲ್‌ನಲ್ಲಿ ಮಧ್ಯಪ್ರದೇಶದ 21 ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ಶಾಸಕರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಿರಲಿಲ್ಲ. ಶಾಸಕರನ್ನು ಬಿಜೆಪಿ ಅಪಹರಣ ಮಾಡಿದೆ ಎಂದು ಕಾಂಗ್ರೆಸ್ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದೆ.

ಕಾಂಗ್ರೆಸ್ ಸರ್ಕಾರ ಪತನ

ಕಾಂಗ್ರೆಸ್ ಸರ್ಕಾರ ಪತನ

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಮಾರ್ಚ್ 10ರಂದು ಪಕ್ಷ ತೊರೆದಿದ್ದರು. ಅವರನ್ನು ಬೆಂಬಲಿಸಿ 22 ಶಾಸಕರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿತ್ತು. ಕಮಲನಾಥ್ ಬಹುಮತ ಸಾಬೀತು ಮಾಡಬೇಕು ಎಂದು ಬಿಜೆಪಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ವಿಧಾನಸಭೆ ಬಲಾಬಲ

ವಿಧಾನಸಭೆ ಬಲಾಬಲ

ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಸದಸ್ಯ ಬಲ 230. 22 ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಪ್ರಸ್ತುತ ಸದಸ್ಯ ಬಲ 206. ಕಾಂಗ್ರೆಸ್ ಸದನದಲ್ಲಿ 92 ಶಾಸಕರನ್ನು ಹೊಂದಿತ್ತು. ಇತರ 7 ಶಾಸಕರ ಬೆಂಬಲವಿದ್ದರೂ ಕಾಂಗ್ರೆಸ್‌ಗೆ 104ರ ಮ್ಯಾಜಿಕ್ ನಂಬರ್ ತಲುಪಲು ಇನ್ನೂ 5 ಶಾಸಕರ ಬೆಂಬಲ ಬೇಕಿತ್ತು. ಬಿಜೆಪಿ 107 ಸದಸ್ಯ ಬಲವನ್ನು ಹೊಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+