• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಾವ ಹಂತದಲ್ಲಿ ಜನಪ್ರತಿನಿಧಿಗಳಿಗೆ ಕೊವಿಡ್-19 ಲಸಿಕೆ?

|

ಭೋಪಾಲ್, ಜನವರಿ.12: ದೇಶಾದ್ಯಂತ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ದಿನಾಂಕ ನಿಗದಿಗೊಳಿಸಿದೆ. ಮೊದಲ ಹಂತ ಮತ್ತು ಎರಡನೇ ಹಂತದಲ್ಲಿ ಯಾರಿಗೆ ಕೊವಿಡ್-19 ಲಸಿಕೆ ನೀಡಬೇಕು ಎನ್ನುವುದು ನಿರ್ಧರಿಸಲಾಗಿದೆ. ಜನಪ್ರತಿನಿಧಿಗಳು ಯಾವ ಹಂತದಲ್ಲಿ ಲಸಿಕೆ ಪಡೆದುಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಆದಿಯಾಗಿ ಸಚಿವರು, ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಮೂರನೇ ಹಂತದಲ್ಲಿ ಕೊವಿಡ್-19 ಲಸಿಕೆ ಪಡೆದುಕೊಳ್ಳಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಲ್ಲಿ 760 ಕೊವಿಡ್ ಲಸಿಕಾ ಕೇಂದ್ರ ಸ್ಥಾಪನೆ

ಸಾರ್ವಜನಿಕರಿಗೆ ಲಸಿಕೆ ನೀಡುವ ಹಂತದಲ್ಲಿ ಜನಪ್ರತಿನಿಧಿಗಳು ಕೊವಿಡ್-19 ಲಸಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಈ ಲಸಿಕೆ ವಿತರಣೆ ವಿಚಾರವಾಗಿ ಯಾವುದೇ ರೀತಿ ಊಹಾಪೋಹಗಳಿಗೆ ಕಿವಿಗೊಡದಂತೆ ಸಚಿವ ನರೋತ್ತಮ್ ಮಿಶ್ರಾ ಮನವಿ ಮಾಡಿಕೊಂಡಿದ್ದಾರೆ.

ಮೊದಲ ಮತ್ತು ಎರಡನೇ ಹಂತದಲ್ಲಿ ಲಸಿಕೆ ವಿತರಣೆ:

ದೇಶದಲ್ಲಿ ಜನವರಿ.16ರಿಂದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಹಂತದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಜನರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಕೊವಿಡ್-19 ವಾರಿಯರ್ಸ್ ಗೆ ಲಸಿಕೆ ನೀಡಲಾಗುತ್ತದೆ.

50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡುವುದಕ್ಕೆ ಪ್ರಾಮುಖ್ಯತೆ ನೀಡಲಾಗುತ್ತದೆ. ಕೊರೊನಾವೈರಸ್ ಲಸಿಕೆಯನ್ನು ಮೊದಲ ಹಂತದಲ್ಲಿ 3 ಕೋಟಿ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 30 ಕೋಟಿ ಜನರಿಗೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.

English summary
Madhya Pradesh CM, Ministers To Get Coronavirus Vaccine In Third Phase.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X