• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಧ್ಯಪ್ರದೇಶದಲ್ಲಿ 'ಗೋವು ಸಚಿವಾಲಯ' ಅಸ್ತಿತ್ವಕ್ಕೆ: ಮುಖ್ಯಮಂತ್ರಿ ಘೋಷಣೆ

|

ಭೋಪಾಲ್, ನವೆಂಬರ್ 18: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ 'ಗೋವು ಸಚಿವಾಲಯ' ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಪ್ರಕಟಿಸಿದ್ದಾರೆ.

ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಈ ಗೋವು ಸಚಿವಾಲಯದ ಭಾಗವಾಗಿರಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.

'ಲವ್ ಜಿಹಾದ್' ವಿರುದ್ಧ ಮಧ್ಯಪ್ರದೇಶದಲ್ಲಿ ಕಾನೂನು ಜಾರಿ

'ರಾಜ್ಯದಲ್ಲಿ ಗೋವುಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ನಾವು ಗೋವು ಸಚಿವಾಲಯ ಸ್ಥಾಪನೆಗೆ ನಿರ್ಧರಿಸಿದ್ದೇವೆ. ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ ಮತ್ತು ಗ್ರಾಮೀಣ ಅಭಿವೃದ್ಧಿ, ಕಂದಾಯ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಈ ಗೋವು ಸಚಿವಾಲಯದ ಭಾಗವಾಗಿರಲಿವೆ' ಎಂದು ಚೌಹಾಣ್ ವಿವರಿಸಿದ್ದಾರೆ.

'ಈ ಸಚಿವಾಲಯದ ಮೊದಲ ಸಭೆಯು ನವೆಂಬರ್ 22ರಂದು ಅಗರ್ ಮಾಲ್ವಾದ ಗೋ ಸಂರಕ್ಷಣಾಲಯದ ಗೋಪಾಷ್ಟಮಿಯಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ' ಎಂದು ತಿಳಿಸಿದ್ದಾರೆ. ಗೋವು ಸಚಿವಾಲಯದ ಅಧಿಕಾರಗಳು ಮತ್ತು ಜವಾಬ್ದಾರಿಗಳ ಬಗ್ಗೆ ಮಧ್ಯಪ್ರದೇಶ ಸರ್ಕಾರ ಇನ್ನೂ ಹೆಚ್ಚಿನ ವಿವರಣೆ ನೀಡಿಲ್ಲ.

ಆಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಗರಣ: ಕಮಲ್ ನಾಥ್ ಮಕ್ಕಳು, ಸೋದರಳಿಯ ಕೂಡ ಭಾಗಿ

ರಾಜ್ಯ ಸರ್ಕಾರವು ಲವ್ ಜಿಹಾದ್ ವಿರುದ್ಧ ಸೂಕ್ತ ಕಾನೂನು ರೂಪಿಸಲಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಹೇಳಿಕೆ ನೀಡಿದ್ದ ಮರು ದಿನವೇ ಗೋವ ಸಚಿವಾಲಯದ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳಲ್ಲಿ ಜಾಮೀನು ರಹಿತ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ ಐದು ವರ್ಷಗಳವರೆಗೆ ಜೈಲಿಗೆ ಹಾಕಬಹುದು ಎಂದು ತಿಳಿಸಿದ್ದರು.

English summary
Madhya Pradesh CM Shivraj Singh Chouhan announced Cow Cabinet for the protection of cows in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X