• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

18 ಅಲ್ಲ, ಯುವತಿಯರ ಮದುವೆ ವಯಸ್ಸು ಹೆಚ್ಚಿಸುವ ಬಗ್ಗೆ ಪ್ರಸ್ತಾಪ

|

ಭೋಪಾಲ್, ಜನವರಿ.12: ದೇಶದಲ್ಲಿ ಮಹಿಳೆಯರ ವಿವಾಹದ ಕನಿಷ್ಠ ವಯೋಮಿತಿ ಹೆಚ್ಚಿಸುವ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಮಾತನಾಡಿದ್ದಾರೆ. ಯಾವ ಆಧಾರದ ಮೇಲೆ ಮಹಿಳೆಯರ ಮದುವೆ ವಯಸ್ಸನ್ನು 18 ವರ್ಷಗಳಿಗೆ ನಿಗದಿಪಡಿಸಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಭೋಪಾಲ್ ನಲ್ಲಿ "ಸಮ್ಮಾನ್" ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದ್ದಾರೆ. ಮಹಿಳೆಯರಿಗೆ ಗೌರವ ಮತ್ತು ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಹೇಳಿದ್ದಾರೆ.

ಗಂಡಿನ ಮದುವೆ ವಯಸ್ಸು 18ಕ್ಕೆ ಇಳಿಸಿ: ಕಾನೂನು ಆಯೋಗ ಕೇಂದ್ರಕ್ಕೆ ಶಿಫಾರಸ್ಸು

ಪುರುಷರ ವಿವಾಹದ ವಯೋಮಿತಿಯನ್ನು 21ಕ್ಕೆ ನಿಗದಿಗೊಳಿಸಲಾಗಿದೆ. ಆದರೆ ಮಹಿಳೆಯರ ವಿವಾಹದ ವಯೋಮಿತಿಯನ್ನು 18ಕ್ಕೆ ನಿಗದಿಗೊಳಿಸಿರುವ ಹಿಂದಿನ ತರ್ಕವಾದರೂ ಏನು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವನ್ನು ಸಾರ್ವಜನಿಕವಾಗಿ ಚರ್ಚೆಗೆ ಒಳಪಡಿಸುವುದಕ್ಕೆ ಬಯಸುತ್ತೇನೆ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಇಳಿಕೆ:

ಮಧ್ಯಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ತಾವು ಅಧಿಕಾರ ಸ್ವೀಕರಿಸಿದ ನಂತರ ಕಳೆದ 8 ತಿಂಗಳಿನಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿದೆ ಎಂದು ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ತಿಳಿಸಿದ್ದಾರೆ. ರಾಜ್ಯದಲ್ಲಿ ಯುವತಿಯರ ನಾಪತ್ತೆಗೆ ಸಂಬಂಧಿಸಿದ 7100 ಪ್ರಕರಣಗಳನ್ನು ಭೇದಿಸಲಾಗಿದ್ದು, ನಾಪತ್ತೆಯಾಗಿದ್ದ ಯುವತಿಯರನ್ನು ಮರಳಿ ಸಂಬಂಧಿಕರಿಗೆ ಒಪ್ಪಿಸಲಾಗಿದೆ.

English summary
Madhya Pradesh CM Shivraj Singh Chouhan Proposed About Raise Marriageable Age For Girls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X