ಮಾಸ್ಕ್ ಇಲ್ಲ, ಅಂತರವೂ ಇಲ್ಲ: ಜೈನ ಮುಖಂಡನ ಸ್ವಾಗತಕ್ಕೆ ಜನವೋ ಜನ
ಬೋಪಾಲ್, ಮೇ 14: ಕೊರೊನಾ ವೈರಸ್‌ಗೆ ಔಷಧಿ ಇಲ್ಲ. ಸಾಮಾಜಿಕ ಅಂತರವೇ ಬಹುದೊಡ್ಡ ಮದ್ದು ಎಂದು ಇಡೀ ವಿಶ್ವವೇ ಎಚ್ಚರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡದೇ ನೂರಾರು ಜನರು ಗುಂಪು ಸೇರಿರುವ ಘಟನೆ ವರದಿಯಾಗಿದೆ.
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಾಂಡಾ ನಗರದಲ್ಲಿ ಜೈನ ಸನ್ಯಾಸಿ ಪ್ರೇಮನ್‌ಸಾಗರ್ ಮತ್ತು ಜೈನ ಸನ್ಯಾಸಿಗಳು ಬಂದಾಗ, ಅವರನ್ನು ಸ್ವಾಗತಿಸಲು ಜನರು ಗುಂಪು ಸೇರಿದೆ. ಈ ಗುಂಪಿನಲ್ಲಿ ಯಾರೊಬ್ಬರು ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಲಾಕ್‌ಡೌನ್ ಇದ್ದರೂ ನಗರದಲ್ಲಿ ಇಂತಹ ಘಟನೆ ಹೇಗೆ ನಡೆಯಿತು ಎಂದು ಸರ್ಕಾರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ, ಜಲ್ಲಾಡಳಿತ ಕಚೇರಿಯಿಂದ 35 ಕಿ.ಮೀ ದೂರದಲ್ಲಿ ಈ ಗುಂಪು ಸೇರಿದ್ದು ಈಗ ಟೀಕೆಗೆ ಗುರಿಯಾಗಿದೆ.
Madhya Pradesh: A crowd gathered to welcome Jain monk Pramansagar in Banda, Sagar district yesterday. Praveen Bhuria, ASP Sagar says, "Directions given to investigate & take action against organizers if social distancing norms & section-144 were violated". pic.twitter.com/eWNgk4qf4o
— ANI (@ANI) May 13, 2020
ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಭೂರಿಯಾ ಪಿಟಿಐಗೆ ಪ್ರತಿಕ್ರಿಯೆ ನೀಡಿದ್ದು, 'ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋಗಳಿಂದ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಇದು ಸೆಕ್ಷನ್ 144ರ ಆದೇಶವನ್ನು ಉಲ್ಲಂಘಿಸಿದ ಪ್ರಕರಣವೆಂದು ಕಾಣುತ್ತಿದೆ. ವೀಡಿಯೋವನ್ನು ಪರಿಶೀಲಿಸಿದ ನಂತರ ಪ್ರಕರಣವನ್ನು ದಾಖಲಿಸುವಂತೆ ಬಾಂಡಾ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದಿದ್ದಾರೆ.

ಇನ್ನು ಬಾಂಡಾ ಪೊಲೀಸ್ ಠಾಣೆಯ ಅಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದು, ''ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ಸುಮಾರು 400 ರಿಂದ 500 ಜನರ ಮೇಲೆ ಪ್ರಕರಣ ದಾಖಲಿಸುತ್ತೇವೆ'' ಎಂದಿದ್ದಾರೆ.
ಪ್ರಸ್ತುತ ಮಧ್ಯಪ್ರದೇಶದಲ್ಲಿ 4173 ಕೊರೊನಾ ಕೇಸ್ ದಾಖಲಾಗಿದೆ. 1937 ಪ್ರಕರಣಗಳು ಸಕ್ರಿಯವಾಗಿದ್ದು, 2004 ಜನರು ಚೇತರಿಕೆ ಕಂಡಿದ್ದಾರೆ. ಈವರೆಗೂ 232 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications