ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ ಬಿಕ್ಕಟ್ಟು ಅಂತ್ಯ; 2 ಗಂಟೆಗೆ ವಿಶ್ವಾಸಮತ ಯಾಚನೆ

|
Google Oneindia Kannada News

ಭೋಪಾಲ್, ಮಾರ್ಚ್ 20 : ಹಲವು ದಿನಗಳ ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು ಇಂದು ಅಂತ್ಯಗೊಳ್ಳಲಿದೆ. ಶುಕ್ರವಾರ ಮುಖ್ಯಮಂತ್ರಿ ಕಮಲನಾಥ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಇಂದು ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವ ಪ್ರಕ್ರಿಯೆ ಮುಗಿಯಬೇಕು. ಮಧ್ಯಾಹ್ನ 2 ಗಂಟೆಗೆ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವ ಪ್ರಕ್ರಿಯೆ ನಡೆಯಲಿದೆ.

ಮಧ್ಯಪ್ರದೇಶ; ಶುಕ್ರವಾರ ಬಹುಮತ ಸಾಬೀತು ಮಾಡಲು ಸುಪ್ರೀಂ ಆದೇಶ ಮಧ್ಯಪ್ರದೇಶ; ಶುಕ್ರವಾರ ಬಹುಮತ ಸಾಬೀತು ಮಾಡಲು ಸುಪ್ರೀಂ ಆದೇಶ

ಮಧ್ಯಪ್ರದೇಶ ಬಿಜೆಪಿ ಘಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಶುಕ್ರವಾರ ಮುಖ್ಯಮಂತ್ರಿ ಕಮಲನಾಥ್ ಬಹುಮತ ಸಾಬೀತು ಮಾಡಬೇಕು ಎಂದು ಆದೇಶ ನೀಡಿತ್ತು. 22 ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ.

ಸುಪ್ರೀಂ ಅಂಗಳ ತಲುಪಿದ ಮಧ್ಯಪ್ರದೇಶ ರಾಜಕೀಯ ಹೈಡ್ರಾಮಸುಪ್ರೀಂ ಅಂಗಳ ತಲುಪಿದ ಮಧ್ಯಪ್ರದೇಶ ರಾಜಕೀಯ ಹೈಡ್ರಾಮ

Madhya Pradesh Floor Test At 2 PM After Supreme Court Order

ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟಿನಿಂದಾಗಿ ಮಧ್ಯಪ್ರದೇಶದ ರಾಜಕೀಯದಲ್ಲಿ ಹಲವು ಬದಲಾವಣೆಯಾಗಿದೆ. ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತವನ್ನು ಗಳಿಸಲಿದೆಯೇ? ಅಥವ ಸರ್ಕಾರ ಪತನವಾಗಲಿದೆಯೇ? ಎಂದು ಕಾದು ನೋಡಬೇಕಿದೆ.

ಮಧ್ಯಪ್ರದೇಶ ಸರ್ಕಾರ ಉಳಿಸಲು ಅಖಾಡಕ್ಕೆ ಇಳಿದ ಡಿ. ಕೆ. ಶಿವಕುಮಾರ್!ಮಧ್ಯಪ್ರದೇಶ ಸರ್ಕಾರ ಉಳಿಸಲು ಅಖಾಡಕ್ಕೆ ಇಳಿದ ಡಿ. ಕೆ. ಶಿವಕುಮಾರ್!

ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಸದಸ್ಯ ಬಲ 230. ಪ್ರಸ್ತುತ ಸದಸ್ಯ ಬಲ 222. ಬಹುಮತ ಸಾಬೀತು ಪಡಿಸಲು 112 ಸದಸ್ಯ ಬಲ ಬೇಕು. ಕಾಂಗ್ರೆಸ್ ಸದನದಲ್ಲಿ 108 ಶಾಸಕರನ್ನು ಹೊಂದಿದೆ. 7 ಇತರ ಶಾಸಕರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಬಿಜೆಪಿ 109 ಸದಸ್ಯ ಬಲವನ್ನು ಹೊಂದಿದೆ.

ಕಾಂಗ್ರೆಸ್‌ನ 21 ಶಾಸಕರು ಬೆಂಗಳೂರಿನ ಯಲಹಂಕ ಸಮೀಪದ ರಮಡಾ ಹೋಟೆಲ್‌ನಲ್ಲಿದ್ದಾರೆ. ಶಾಸಕರು ಹೋಟೆಲ್‌ನಲ್ಲಿಯೇ ಇದ್ದು, ಇವರು ಅಧಿವೇಶನಕ್ಕೆ ಗೈರಾದರೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ಉಂಟಾಗಲಿದೆ.

English summary
The floor test of the Congress government lead by Kamal Nath in Madhya Pradesh will be held at 2 pm on Friday. Supreme Court directed to conclude by 5 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X