ಮಧ್ಯಪ್ರದೇಶ ಸರ್ಕಾರಕ್ಕೆ ಅಗ್ನಿ ಪರೀಕ್ಷೆ: ವಿಶ್ವಾಸಮತ ಯಾಚನೆ ಇಂದು
ಭೂಪಾಲ್, ಮಾರ್ಚ್ 16: ಮಧ್ಯಪ್ರದೇಶದಲ್ಲಿ ಇಂದು ವಿಶ್ವಾಸಮತ ಯಾಚನೆ ನಡೆಯಲಿದ್ದು, ಕಮಲ್‌ನಾಥ್ ಸರ್ಕಾರಕ್ಕೆ ಇದೊಂದು ಅಗ್ನಿ ಪರೀಕ್ಷೆ ಎಂದೇ ಹೇಳಬಹುದಾಗಿದೆ.
ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕಮಲನಾಥ್ ಅವರಿಗೆ ಅವಕಾಶ ನೀಡಬೇಕೆಂದು ಸ್ಪೀಕರ್ಗೆ ರಾಜ್ಯಪಾಲ ಲಾಲ್ಜೀ ಟಂಡನ್ ಸೂಚನೆ ನೀಡಿದ್ದಾರೆ.
ಅದರಂತೆ, ಸೋಮವಾರ ವಿಶ್ವಾಸಮತ ಯಾಚನೆಗೆ ಅವಕಾಶ ನೀಡುವ ಸಾಧ್ಯತೆ ಇರುವುದರಿಂದ ಮತ್ತೆ ಮಧ್ಯಪ್ರದೇಶದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ.
ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು.
ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು.

ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಹೇಗೆ?
ಬಿಎಸ್ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ.

ಕಮಲ್‌ನಾಥ್ ಬಹುಮತ ಸಾಬೀತುಪಡಿಸಲಿದ್ದಾರೆಯೇ?
ಇನ್ನು ಜೈಪುರ್‌ದಿಂದ ವಾಪಸ್ಸಾಗಿರುವ ಕಾಂಗ್ರೆಸ್ ಶಾಸಕರು ವಿಶ್ವಾಸಮತ ಗೆಲ್ಲುವಲ್ಲಿ ಕಮಲ್‌ನಾಥ್ ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಆದರೆ ಬೆಂಗಳೂರಿನಲ್ಲಿರುವ ಶಾಸಕರ ನಡೆ ಇನ್ನೂ ನಿಗೂಢವಾಗಿದ್ದು, ನಾಳಿನ ವಿಶ್ವಾಸಮತ ಏನಾಗಲಿದೆ ಎಂಬುದರ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
ಕಮಲ್‌ನಾಥ್ ಸರ್ಕಾರವನ್ನು ಬೀಳಿಸಲೆಂದೇ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪ್ರತಿಷ್ಠೆ ಕೂಡ ಇಂದು ಪಣಕ್ಕಿಡಲಾಗಿದೆ. ಪಕ್ಷಾಂತರ ಮಾಡಿದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪಾಠ ಕಲಿಸಲು ಪಣ ತೊಟ್ಟಿರುವ ಕಾಂಗ್ರೆಸ್ ಕುಡ ಅತೃಪ್ತರನ್ನು ಮತ್ತೆ ಪಕ್ಷಕ್ಕೆ ಸೆಳೆಯುವಲ್ಲಿ ನಿರತವಾಗಿದೆ.ಬೆಂಗಳೂರಿನ ಪ್ರೆಸ್ಟೀಜ್ ಗಾಲ್ಫ್ಶೈರ್ ಹೋಟೆಲ್ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ನ ಅತೃಪ್ತ ಶಾಸಕರನ್ನು ರಾಜ್ಯದ ಬಿಜೆಪಿ ನಾಯಕರು ರಮಾಡ ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ.
ವಿಶ್ವಾಸಮತ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್
ಜೈಪುರದ ರೆಸಾರ್ಟ್‌ನಲ್ಲಿ ಹಾಯಾಗಿದ್ದ ಕೆಲವು ಕಾಂಗ್ರೆಸ್ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಖಂಡಿತವಾಗಿಯೂ ಬಿಜೆಪಿಗೆ ಹಿನ್ನೆಡೆ ಎಂದೇ ಅಂದಾಜಿಸಲಾಗಿದ್ದು, ಕಾಂಗ್ರೆಸ್ ವಿಶ್ವಾಸಮತ ಗೆಲ್ಲುವ ಭರವಸೆಯಲ್ಲಿದೆ. ಆದರೆ ಈ ಶಾಸಕರು ಜೈಪುರ್‌ದಿಂದ ವಿಶೇಷ ವಿಮಾನದಲ್ಲಿ ಭೋಪಾಲ್‌ಗೆ ಬಂದು, ಅಲ್ಲಿಂದ ಮತ್ತೊಂದು ರೆಸಾರ್ಟ್‌ಗೆ ಶಿಫ್ಟ್ ಆಗುತ್ತಿರುವ ದೃಶ್ಯಾವಳಿಗಳನ್ನು ಎಲ್ಲರೂ ವೀಕ್ಷಿಸಿದ್ದಾರೆ.

ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳುತ್ತಾ ಕಾಂಗ್ರೆಸ್
ಕಾಂಗ್ರೆಸ್ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ಬಯಸಿದೆ. ರಾಜ್ಯ ವಿಧಾಸನಭೆ ಅಜೆಂಡಾದಲ್ಲಿ ವಿಶ್ವಾಸಮತಯಾಚನೆ ಬಗ್ಗೆ ಉಲ್ಲೇಖ ಇಲ್ಲದಿರುವ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡಿದ್ದೇವೆಯ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ಭಾರ್ಗವ ತಿಳಿಸಿದ್ದಾರೆ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications